ಪ್ರತಿನಿತ್ಯ ಕುಡಿಯುವ ನೀರು ಪೂರೈಸಿ: ವಿನಯಕುಮಾರ್ ಸೊರಕೆ

Spread the love

ಮಡಿಕೇರಿ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಪ್ರತಿನಿತ್ಯ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಎಂಜಿನಿಯರ್ಗಳ ಜತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

vinay-kumar-sorake-madikeri-visit vinay-kumar-sorake-madikeri-visit-01

ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಈಗಾಗಲೇ ನಗರ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ಅನುದಾನ ಬೇಕಿದ್ದಲ್ಲಿ ಬಿಡುಗಡೆ ಮಾಡಲಾಗುವುದು, ಆದರೆ ಕೊಟ್ಟಿರುವ ಅನುದಾನವನ್ನು ತುತರ್ಾಗಿ ಖಚರ್ು ಮಾಡಲು ಏನು ತೊಂದರೆ ಎಂದು ಸಚಿವರು ಪ್ರಶ್ನಿಸಿದರು.
ಹೊಸ ಬೋರ್ವೆಲ್ಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವುದು. ಖಾಸಗಿ ಬೋರ್ವೆಲ್ಗಳು ಇದ್ದಲ್ಲಿ ಅವುಗಳನ್ನು ಬಾಡಿಗೆಗೆ ಉಪಯೋಗಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು. ಒಟ್ಟಾರೆ ಕುಡಿಯುವ ನೀರಿನ ಹಾಹಾಕಾರ ಉಂಟಾಗದಂತೆ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಸಚಿವರು ನುಡಿದರು.
ನಗರೋತ್ಥಾನ ಅನುಷ್ಠಾನ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಕಾಮಗಾರಿಗಳನ್ನು ಹಮ್ಮಿಕೊಳ್ಳಬಹುದಾಗಿದೆ. ಎಸ್.ಎಫ್.ಸಿ. 13 ನೇ ಹಣಕಾಸು, ಶೇ.24 ರಷ್ಟು ಅನುದಾನ ಹೀಗೆ ಹಲವು ಯೋಜನೆಗಳ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡಬೇಕು. ಒಂದು ಕೋಟಿ ರೂ.ವರೆಗಿನ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರಿಗೆ ಅನುಮತಿ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವರು ಸಲಹೆ ಮಾಡಿದರು.
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಸತಿ ಕಲ್ಪಿಸುವ ಸಂಬಂಧ ಅಂಬೇಡ್ಕರ್ ವಸತಿ ಯೋಜನೆ ಹಾಗೂ ವಾಜಪೇಯಿ ವಸತಿ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು. ಇದರಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಅನುದಾನ ದೊರೆಯಲಿದೆ ಎಂದು ಅವರು ತಿಳಿಸಿದರು.
ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆದಿದ್ದು, ಎರಡು ಮೂರು ತಿಂಗಳಲ್ಲಿ ಸಿಬ್ಬಂದಿ ನಿಯೋಜನೆ ಆಗುವ ಸಾಧ್ಯತೆ ಇದೆ. ಆದರೂ ತುರ್ತು ಅಗತ್ಯವಿದ್ದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ಹೇಳಿದರು.
ಪೌರ ಕಾರ್ಮಿಕ ಸಿಬ್ಬಂದಿಗಳು ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ನಿಯೋಜಿಸಿಕೊಳ್ಳಬಹುದಾಗಿದೆ ಎಂದು ವಿನಯ ಕುಮಾರ್ ಸೊರಕೆ ಅವರು ಹೇಳಿದರು.
ಆಸ್ತಿ ತೆರಿಗೆ, ನೀರಿನ ತೆರಿಗೆ, ವಾಣಿಜ್ಯ ತೆರಿಗೆಗಳನ್ನು ಚಾಚು ತಪ್ಪದೇ ಸಂಗ್ರಹಿಸಬೇಕು. ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯವನ್ನು ವೃದ್ಧಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಸಚಿವರು ಸಲಹೆ ಮಾಡಿದರು.
ಮಡಿಕೇರಿ ನಗರಸಭೆಗೆ ಕಳೆದ ಮೂರು ವರ್ಷಗಳಲ್ಲಿ ಸರಕಾರ 15 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಗರ, ಪಟ್ಟಣ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಸಚಿವರು ಹೇಳಿದರು.
ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೇ. 75 ರಷ್ಟು ಅನುದಾನ: ಮಡಿಕೇರಿ ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಸಂಬಂಧ ಶೇ.75 ರಷ್ಟು ಅನುದಾನವನ್ನು ಒದಗಿಸಲಾಗುವುದು. ಖಾಸಗಿ ಬಸ್ ನಿಲ್ದಾಣ ಎಲ್ಲಿ ನಿರ್ಮಾಣ ಮಾಡಬೇಕು ಎಂಬ ಬಗ್ಗೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಸ್ಥಳ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಮಾರುಕಟ್ಟೆ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ. ಇದನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಘಟಕ ನಿಮರ್ಾಣಕ್ಕೆ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರು ಮಾತನಾಡಿ ಮಡಿಕೇರಿ ನಗರಕ್ಕೆ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ವಾಹನ ನಿಲುಗಡೆಗೆ ತುಂಬಾ ತೊಂದರೆಯಾಗಿದೆ. ಆದ್ದರಿಂದ ‘ಬಹು ವಾಹನ ನಿಲುಗಡೆ’ ಮಾಡಲು ಉದ್ದೇಶಿಸಲಾಗಿದ್ದು, (ಮಲ್ಟಿ ಲೆವೆಲ್ ಪಾರ್ಕಿಂಗ್) ಇದಕ್ಕಾಗಿ ಅನುಮತಿ ನೀಡುವಂತೆ ಅವರು ಮನವಿ ಮಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೂರಯ್ಯ ಅಬ್ರಾರ್ ಅವರು ಮಾತನಾಡಿ ರೋಷನಾರ ಕೆರೆ ಅಭಿವೃದ್ಧಿ ಸಂಬಂಧ ನಗರಸಭೆಯೊಂದಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಮಡಿಕೇರಿ ನಗರ ಬೆಳವಣಿಗೆಯಾಗುತ್ತಿದ್ದು, ಹೊಸ ಲೇಔಟ್ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಆದರೆ ಅರಣ್ಯ ಇಲಾಖೆಯವರ ಅನುಮತಿ ಬೇಕಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.
ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದಶರ್ಿ ಚಂದ್ರಶೇಖರ ಅವರು ಮಾತನಾಡಿ ಮಡಿಕೇರಿ ನಗರಸಭೆಯಲ್ಲಿ 81 ಲಕ್ಷ ರೂ. ಲಭ್ಯವಿದ್ದು, ಸುಮಾರು 30 ಲಕ್ಷದಷ್ಟು ಮಾತ್ರ ಖಚರ್ು ಮಾಡಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.
ಪೌರಾಯುಕ್ತರಾದ ಬಿ.ಬಿ.ಪುಷ್ಪಾವತಿ ಅವರು 2016-17ನೇ ಸಾಲಿನ ಬಜೆಟಿನಲ್ಲಿ, ಕೆರೆಗಳು, ಮೈದಾನ ಹಾಗೂ ಸ್ಮಶಾನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸ್ವಚ್ಚ ಭಾರತ ಅಭಿಯಾನದಡಿ ನಗರ ಸ್ವಚ್ಚತೆ ಕಡೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ಅವರು ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ಶ್ರೀಮತಿ ಬಂಗೇರ ಅವರು ಮಾತನಾಡಿ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಂಬಂಧಿಸಿದಂತೆ ಕೂಟುಹೊಳೆ ಅಭಿವೃದ್ಧಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ವಿರಾಜಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಕೂತಂಡ ಸಚಿನ್ ಅವರು ವಿರಾಜಪೇಟೆಯ ಪಟ್ಟಣ ಅಭಿವೃದ್ಧಿ, ಕುಡಿಯುವ ನೀರು ಸಂಬಂಧ ಹಲವು ಮಾಹಿತಿ ನೀಡಿದರು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವಿಜಯಲಕ್ಷ್ಮಿ ಅವರು ಸೋಮವಾರಪೇಟೆ ಪಟ್ಣಣಕ್ಕೆ ಕುಡಿಯುವ ನೀರು ಇದೆ. ಆದರೆ ಬೋರ್ವೆಲ್ ಪದೇ ಪದೇ ಕೆಟ್ಟು ಹೋಗುತ್ತಿದೆ. ಇದರಿಂದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಅವರು ತಿಳಿಸಿದರು.
ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಎಂ.ರವಿಕುಮಾರ್ ಅವರು ಮಡಿಕೇರಿ ನಗರ ಅಭಿವೃದ್ಧಿ, ನಗರೋತ್ಥಾನ ಕಾಮಗಾರಿಗಳು ಮತ್ತಿತರ ಸಂಬಂಧ ಹಲವು ಮಾಹಿತಿ ನೀಡಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಮನೋಹರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ಕೃಷ್ಣೇಗೌಡ, ವಿರಾಜಪೇಟೆ ಪ.ಪಂ.ಉಪಾಧ್ಯಕ್ಷರಾದ ತಸ್ಲೀಮಾ ಅಕ್ತರ್ ಅವರು ಹಲವು ಮಾಹಿತಿ ನೀಡಿದರು.
ಇದಕ್ಕೂ ಮೊದಲು ಸಚಿವರು ಮಹದೇವಪೇಟೆಯಲ್ಲಿ ಕೈಗೊಳ್ಳಲಾಗಿರುವ ರಸ್ತೆ ಅಗಲೀಕರಣ ಸಂಬಂಧ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಖಾಸಗಿ ಬಸ್ ನಿಲ್ದಾಣಕ್ಕೆ ಗುರುತಿಸಲಾಗಿರುವ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಬಂಗೇರಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮನ್ಸೂರ್, ಸದಸ್ಯರಾದ ಚುಮ್ಮಿದೇವಯ್ಯ, ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಮತ್ತಿತರರು ಇದ್ದರು.


Spread the love