ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಕಳೆದ ಸಾಲಿನ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಬೆಂಗಳೂರಿನ ಅಂಬೇಡ್ಕರ್ ಆಡಿಟೋರಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ರಾಜ್ಯದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು 51 ಗಣ್ಯ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.

ನಾಡಿನ ಹಿರಿಯ ವ್ಯಂಗ್ಯಚಿತ್ರಕಾರ ಪ್ರಜಾವಾಣಿಯ ಪ್ರಕಾಶ್ ಶೆಟ್ಟಿ, ಮಂಗಳೂರಿನ ಹಿರಿಯ ಪತ್ರಕರ್ತ ಸುಕೇಶ್ ಕುಮಾರ್ ಶೆಟ್ಟಿ ಸೇರಿದಂತೆ 51 ಮಂದಿಯನ್ನು ಈ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಪುಟ್ಟರಾಜು, ಕಾರ್ಯದರ್ಶಿ ರೂಪ, ರಾಷ್ಟ್ರೀಯ ಪತ್ರಕರ್ತ ಸಂಘದ ಉಪಾಧ್ಯಕ್ಷ ಎಚ್.ಬಿ. ಮದನ್ ಗೌಡ, ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅಕಾಡೆಮಿ ಸದಸ್ಯರಾದ ಟೆಲೆಕ್ಸ್‍ ರವಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.