ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ : ಆತ್ಮೀಯ ಸ್ವಾಗತ

Spread the love

ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ : ಆತ್ಮೀಯ ಸ್ವಾಗತ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ಮಾನಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ , ಹೆಲಿಕ್ಯಾಪ್ಟಾರ್ ಮೂಲಕ ಕೂಳೂರು ಹೆಲಿಪ್ಯಾಡ್ ನಲ್ಲಿ ಬಂದಿಳಿದರು. ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಗೋಲ್ಡ್‌ ಫಿಂಚ್ ಮೈದಾನದಲ್ಲಿ ನಡೆಯುವ ಪ್ರಧಾನಿಯವರ ಸಮಾವೇಶಕ್ಕೆ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಬಿಜೆಪಿ ಕಾರ್ಯ ಕರ್ತರು ಸೇರಿದಂತೆ ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಕಾರ್ಯಕರ್ತರ ಹರ್ಷೋಧ್ಘಾರ ಮುಗಿಲು ಮುಟ್ಟಿದ್ದು, ಸಮಾವೇಶ ನಡೆಯುವ ಸ್ಥಳ ಸಂಪೂರ್ಣ ಕೇಸರಿ ಮಯವಾಗಿದೆ. ಪುಟ್ಟ ಮಕ್ಕಳೂ ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಮಹಿಳೆಯರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ರಾಜ್ಯದಲ್ಲೇ ಮೊದಲ ಸಮುದ್ರ ನೀರು ಸಂಸ್ಕರಣ ಸ್ಥಾವರ, ನವ ಮಂಗಳೂರು ಬಂದರಿನಲ್ಲಿ 14ನೇ ಜೆಟ್ಟಿಯ ಯಾಂತ್ರೀಕರಣ ಸೇರಿದಂತೆ ಹಲವು ಪ್ರಮುಖ ಯೋಜನೆ ಗಳ ಲೋಕಾರ್ಪಣೆ ಮತ್ತು ಇತರ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಸೇರಿದಂತೆ ಎಂಆರ್‌ಪಿಎಲ್‌ ಹಾಗೂ ವಮಂಗಳೂರು ಬಂದರು ಪ್ರಾಧಿಕಾರ ವ್ಯಾಪ್ತಿಯ ಒಟ್ಟು ಸುಮಾರು 3,800 ಕೋ.ರೂ. ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.


Spread the love