ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್‌ ಮೋದಿ ಸಂಚರಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತ

Spread the love

ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್‌ ಮೋದಿ ಸಂಚರಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತ

ಮೈಸೂರು: ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತ ಸಂಭವಿಸಿದ್ದು, ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಭೇಟಿ ನೀಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ಮೋದಿ (70), ಪ್ರಹ್ಲಾದ್ ಮೋದಿ ಪುತ್ರ ಮೆಹೂಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿಂದಾಲ್ ಮೋದಿ (35) ಹಾಗೂ ಮೊಮ್ಮಗ ಮಾಸ್ಟರ್ ಮೆಹತ್ ಮೆಹೋಲ್‌ ಮೋದಿ (06) ಹಾಗೂ ಕಾರು ಚಾಲಕ ಸತ್ಯನಾರಾಯಣ ಚಾಲಕ (46) ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೋದಿ ಸಹೋದರನ ಮೊಮ್ಮಗನ ಕಾಲಿಗೆ ಹಾಗೂ ಪ್ರಹ್ಲಾದ್‌ ಮೋದಿಗೆ ಮುಖದ ಬಳಿ ಗಾಯವಾಗಿದೆ. ಉಳಿದ ಯಾರಿಗೂ ದೊಡ್ಡ ಪ್ರಮಾಣದಲ್ಲಿ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಜೆಎಸ್‌ಎಸ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.


Spread the love