ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೇರ ಪ್ರಸಾರ 

Spread the love

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೇರ ಪ್ರಸಾರ 

ಮಂಗಳೂರು : ಭಾರತೀಯ ಕೃಷಿ ಸಂಶೋದನಾ ಪರಿಷತ್‍ನ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಕೃಷಿ ವಿಜ್ಞಾನ ಕೇಂದ್ರವು ಫೆಬ್ರವರಿ 24 ರಂದು ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಉದ್ಘಾಟಿಸಲಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಉದ್ಘಾಟನೆಯ  ನೇರ ಪ್ರಸಾರದ ವೀಕ್ಷಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗುವುದು.

ಸಂಸದ ನಳಿನ್ ಕುಮಾರ್ ಕಟೀಲ್ ರವರು ನೇರ ಪ್ರಸಾರದ ಚಾಲನೆ ಮಾಡಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ರವರು ಈ ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳಾದ ಜಂಟಿ ಕೃಷಿ ನಿರ್ದೇಶಕರು, ಕೃಷಿ ಉಪ ನಿರ್ದೇಶಕರು, ತೋಟಗಾರಿಕಾ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಸಹಾಯಕ ಕಾರ್ಯದರ್ಶಿಗಳು ಮತ್ತು ಮೀನುಗಾರಿಕಾ ಕಾಲೇಜಿನ ಡೀನ್ ರವರು ನೇರ ಪ್ರಸಾರ ವೀಕ್ಷಣೆಗೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.  ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ| ಎ.ಟಿ. ರಾಮಚಂದ್ರ ನಾಯ್ಕ ಇವರ ಪ್ರಕಟಣೆ ತಿಳಿಸಿದೆ.


Spread the love