ಪ್ರವಾಸಿಗರ ಅನುಕೂಲಕ್ಕಾಗಿ ವಿವಿಧ ಭಾಷೆಗಳಲ್ಲಿ ಟೋಲ್ ಫ್ರೀ ಸಹಾಯವಾಣಿ

Spread the love

ವಿವಿಧ ಭಾಷೆಗಳಲ್ಲಿ ಟೋಲ್ ಫ್ರೀ ಸಹಾಯವಾಣಿ

ಮ0ಗಳೂರು : ಭಾರತಕ್ಕೆ ಭೇಟಿ ನೀಡುವ ವಿದೇಶಿ ಹಾಗೂ ದೇಶೀಯ ಪ್ರವಾಸಿಗರ ಅನುಕೂಲಕ್ಕಾಗಿ 24/7 ಪ್ರವಾಸಿ ಮಾಹಿತಿಯನ್ನು ಟೋಲ್ ಫ್ರೀ ಸಂಖ್ಯೆ: 1800111363 ಅಥವಾ 1363 ಸಹಾಯವಾಣಿಯ ಮೂಲಕ 12 ವಿವಿಧ ಅಂತರಾಷ್ಟ್ರೀಯ ಭಾಷೆಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಒಳಗೊಂಡಂತೆ ಪ್ರವಾಸಿ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಭಾರತ ಪ್ರವಾಸೋದ್ಯಮ ಮಂತ್ರಾಲಯವು ಒದಗಿಸಿದೆ.

ಈ ಬಗ್ಗೆ ಜಿಲ್ಲೆಯ ಎಲ್ಲಾ ಪ್ರವಾಸಿ ಸ್ಥಳಗಳಲ್ಲಿ, ಟೂರ್ ಓಪರೇಟರ್‍ಗಳಿಗೆ ಹಾಗೂ ಉದ್ದಿಮೆದಾರರಿಗೆ ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದವರಿಗೆ ಮಾಹಿತಿಯನ್ನು ನೀಡಿ, ಪ್ರವಾಸಿಗರಿಗೆ ಅನುಕೂಲತೆಯನ್ನು ಕಲ್ಪಿಸಲು ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಇವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಮಂಗಳೂರು ದೂರವಾಣಿ ಸಂಖ್ಯೆ: 0824-2453926 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


Spread the love