
ಪ್ರವೀಣ್ ನೆಟ್ಟಾರು ಪತ್ನಿ ಬದುಕಿಗೆ ಶಾಶ್ವತ ದಾರಿ ತೋರಿಸದ ಬಿಜೆಪಿ: ಪೇಪರ್ ಚಾಕ್ಲೇಟ್ ನೀಡಿ ದ್ರೋಹ – ಕಾಂಗ್ರೆಸ್ ಕಿಡಿ
ಬೆಂಗಳೂರು: ಸರಕಾರ ಬದಲಾದ ಬೆನ್ನಲ್ಲೇ ಹಿಂದಿನ ಸರಕಾರ ಮಾಡಿರುವ ಎಲ್ಲ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶದಿಂದ ಅನುಕಂಪದ ಆಧಾರದಲ್ಲಿ ನೌಕರಿ ಪಡೆದಿದ್ದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯ ನೌಕರಿ ಕಳೆದುಕೊಂಡಿದ್ದಾರೆ.
ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ @BJP4Karnataka ಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ & ಸಮಯ ಇರಲು ಸಾಧ್ಯವೇ?
ನಿಯಮದ ಪ್ರಕಾರ
ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ,ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ. https://t.co/n8CbZJxvi2 pic.twitter.com/Y81hyNMD39
— Karnataka Congress (@INCKarnataka) May 27, 2023
ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿಯು ಕಾಂಗ್ರೆಸ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ‘ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ’ ಎಂದು ಟೀಕಿಸಿ ಟ್ವೀಟ್ ಮಾಡಿದೆ.
ಇದೀಗ ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ”ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ & ಸಮಯ ಇರಲು ಸಾಧ್ಯವೇ? ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ, ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ” ಎಂದು ಕಿಡಿಕಾರಿದೆ.