ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ(ಉ) ಅಧ್ಯಕ್ಷ ಚರಣ್ ವಿಠ್ಠಲ್ ಖಂಡನೆ

Spread the love

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ(ಉ) ಅಧ್ಯಕ್ಷ ಚರಣ್ ವಿಠ್ಠಲ್ ಖಂಡನೆ

ಉಡುಪಿ: ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಸಂಘಟನಾ ಕಾರ್ಯದರ್ಶಿಗಳು, ಹಿಂದೂ ಯುವ ಮುಖಂಡರು ಪ್ರವೀಣ್ ನೆಟ್ಟಾರು ಅವರ ಕೊಲೆ ಅಮಾನವೀಯ ಹಾಗೂ ಖಂಡನೀಯ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ (ಉತ್ತರ) ಅಧ್ಯಕ್ಷರಾದ ಚರಣ್ ವಿಠ್ಠಲ್ ಹೇಳಿದ್ದಾರೆ.

ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರ ಹತ್ಯೆ ನೆಡೆಯುತ್ತಾನೆ ಇದೆ ಇದರ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ಕಠಿಣ ಕ್ರಮವನ್ನು ಕೈಗೊಂಡು ರಾಜ್ಯದ ಪ್ರತಿಯೊಬ್ಬ ಜನತೆಗೆ ರಕ್ಷಣೆ ನೀಡಬೇಕು. ಕೊಲೆ ಮಾಡಿದಂತಹ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಪ್ರಕಾರ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಸರಕಾರವನ್ನು ಒತ್ತಾಯಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here