ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ

Spread the love

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರ ಬಂಧನ

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಬೆಳ್ಳಾರೆ ನಿವಾಸಿ ಮೊಹ್ಮದ್‌ ಶಫೀಕ್‌ (27) , ಸವಣೂರು ನಿವಾಸಿ ಝಾಕೀರ್‌ (29) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯ ನೇತ್ರತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಇಂದು ಮದ್ಯಾಹ್ನ ತುರ್ತು ಸಭೆ ನಡೆಸಿದ್ದಾರೆ. ಪಶ್ಚಿಮ ವಲಯ ಐಜಿ ದೇಚಜ್ಯೋತಿ ರೇ, ಎಸ್ಪಿ ಋಷಿಕೇಶ್ ಸೋನಾವಣೆ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅಕ್ಷಯ ಚಿಕನ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿರುವ ಮಧು ರಾಯನ್‌ ಅವರು ನೀಡಿದ ದೂರಿನಂತೆ ಕೃತ್ಯವೆಸಗಿದ ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಲಾಗಿತ್ತು.


Spread the love