ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ, ಇನ್ನಿಬ್ಬರು ಆರೋಪಿಗಳ ಬಂಧನ 

Spread the love

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ, ಇನ್ನಿಬ್ಬರು ಆರೋಪಿಗಳ ಬಂಧನ 

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ನಾವೂರು ನಿವಾಸಿ ಅಬಿದ್ (22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು.

ಈ ಮೂಲಕ ಪ್ರವೀಣ್ ನೆಟ್ಟಾರ್ ಕೊಲೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿಗಳ ಸಂಖ್ಯೆ ಆರಕ್ಕೆ ಏರಿದೆ.

ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಹತ್ಯೆಯ ದಾಳಿಕೋರರನ್ನು ಗುರುತಿಸಿರುವ ಪೊಲೀಸರು, ಹತ್ಯೆ ನಡೆಸಿದವರಿಗೆ ಶೋಧ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


Spread the love