ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ – ಸಚಿವ ಸುರೇಶ್ ಕುಮಾರ್

Spread the love

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ – ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಎಸ್ಸೆಸ್ಸೆಲ್ಸಿಗೆ ಕೋರ್ ವಿಷಯ (ವಿಜ್ಞಾನ, ಗಣಿತ, ಸಮಾಜ ವಿಜ್ಞಾನ)ಕ್ಕೆ ಒಂದು ಪರೀಕ್ಷೆ, ಬಹು ಆಯ್ಕೆ ಪ್ರಶ್ನೆಗಳು ಮಾತ್ರ ಇರಲಿದೆ. ಹಾಗೂ ಸರಳವಾಗಿರಲಿದೆ. ಪ್ರಥಮ ಭಾಷೆ, ದ್ವಿತೀಯ ಹಾಗೂ ತೃತೀಯ ಭಾಷೆಗೆ ಮತ್ತೊಂದು ಪರೀಕ್ಷೆ ಇರಲಿದೆ.

‘ಕಳೆದ ಬಾರಿ 9ನೇ ತರಗತಿಯ ಪರೀಕ್ಷೆಯೂ ನಡೆದಿಲ್ಲ. ಅದರ ಆಧಾರದ ಮೇಲೆ ಅಂಕೆಗಳನ್ನು ನೀಡಲು ಸಾಧ್ಯವಾಗದ ಕಾರಣ, ಎಸ್ಸೆಸ್ಸೆಲ್ಸಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದೂ ಹೇಳಿದರು.

‘ಪರೀಕ್ಷೆಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳಿದ್ದು, ನೇರ ಮತ್ತು ಸರಳವಾಗಿರುತ್ತವೆ. ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪತ್ರಿಕೆ 120 ಅಂಕಗಳಿಗೆ ಇದ್ದು ಮೂರು ಗಂಟೆ ಸಮಯ ನಿಡಲಾಗುತ್ತದೆ’ ಎಂದರು.

‘ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ ಕಲಾ ವಿಭಾಗ ಸೇರಿದಂತೆ ಯಾವುದೇ ಕೋರ್ಸ್‌ ತೆಗೆದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಯಾರನ್ನೇ ಆಗಲಿ ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ ಎ, ಎ ಗ್ರೇಡ್ ನೀಡಲಾಗುತ್ತದೆ’ ಎಂದರು.

ಕೋವಿಡ್ ಕಾರಣದಿಂದ ಗೈರಾಗಿದ್ದರೆ ಅಂತಹ ಮಕ್ಕಳಿಗೆ ಮಾತ್ರ ಪೂರಕ ಪರೀಕ್ಷೆ ನಡೆಸಲಾಗುತ್ತದೆ ಎಂದೂ ತಿಳಿಸಿದರು.


Spread the love