ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ಅತ್ಯಂತ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

Spread the love

ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ಅತ್ಯಂತ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜಿಲ್ಲೆಯಾದ್ಯಂತ ಒಟ್ಟು 22 ಕೇಂದ್ರಗಳಲ್ಲಿ ಇದೇ ಮೇ.21 ಹಾಗೂ 22ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ನಿಯೋಜಿತ ಸಿಬ್ಬಂದಿಗಳು ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಮೇ.19ರ ಗುರುವಾರ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

22 ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅನುಭವಿಗಳಾಗಿದ್ದಾರೆ, ಈ ರೀತಿಯ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿರುತ್ತಾರೆ, ಆದರೆ, ಇದೀಗ ನಡೆಯುವ ಪರೀಕ್ಷೆಯ ಸೂಕ್ಷ್ಮತೆಯ ಅರಿವಿರುವುದರಿಂದ ಪರೀಕ್ಷಾ ಕೇಂದ್ರಗಳ ಎಲ್ಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅತ್ಯಂತ ಜಾಗರೂಕತೆಯಿಂದ ಸರ್ಕಾರದ ಮಾರ್ಗಸೂಚಿಗಳನ್ವಯ ಕರ್ತವ್ಯ ನಿರ್ವಹಿಸಬೇಕು, ಪರೀಕ್ಷಾ ಕೇಂದ್ರಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

575 ಹುದ್ದೆಗಳ ಭರ್ತಿಗೆ ನಡೆಯುತ್ತಿರುವ ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಎಚ್ಚರ ವಹಿಸಬೇಕು, ಈಗಾಗಲೇ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಮಾಹಿತಿ ನೀಡಲಾಗಿದೆ, 22ರ ಪೈಕಿ ಎರಡು ಕೇಂದ್ರಗಳನ್ನು ಹೊರತುಪಡಿಸಿದಂತೆ ಉಳಿದೆಲ್ಲವೂ ಖಾಸಗಿ ಕೇಂದ್ರವಾಗಿರುವುದರಿಂದ 22 ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿಯನ್ನು ಅಳವಡಿಸಬೇಕು, ಅದರ ಫೂಟೇಜ್ ಅನ್ನು ಪರಿಶೀಲಿಸಬೇಕು ಹಾಗೂ ಅದರ ದತ್ತಾಂಶವನ್ನು ಸಹ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಪರೀಕ್ಷಾ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಸಮಸ್ಯೆಗಳು ಉದ್ಬವಿಸಬಾರದು, ಯಾವುದಾರೂ ಲೋಪದೋಷಗಳು ಇದ್ದಲ್ಲಿ ಅವುಗಳನ್ನು ಈಗಲೇ ಬಗೆಹರಿಸಿಕೊಳ್ಳಬೇಕು, ಜಿಲ್ಲಾಧಿಕಾರಿಯವರು ಸೇರಿದಂತೆ ಯಾರೊಬ್ಬರೂ ಕೂಡ ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ತರುವಂತಿಲ್ಲ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೊಠಡಿಯಲ್ಲಿ ಬೆಳಕು, ಫ್ಯಾನ್, ಶೌಚಾಲಯ, ಸಿಸಿಟಿವಿಯ ಕಾರ್ಯನಿರ್ವಹಣೆ ಸೇರಿದಂತೆ ಅಗತ್ಯ ಸೌಕರ್ಯಗಳ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.

ಡಿಸಿಪಿ ಹರಿರಾಂ ಶಂಕರ್ ಮಾತನಾಡಿ, ಪರೀಕ್ಷಾ ಕೇಂದ್ರಗಳ ಸಿಬ್ಬಂದಿಗಳಿಗೆ ನಿರ್ದೇಶನವಿರುವಂತೆ ಪ್ರವೇಶಧ್ವಾರದಲ್ಲಿ ತಪಾಸಣೆ ನಡೆಸಬೇಕು, ಪೆÇಲೀಸ್ ಇಲಾಖೆಯಿಂದ 22 ಕೇಂದ್ರಗಳಿಗೆ ಮಹಿಳಾ ಹಾಗೂ ಪುರುಷ ಸಿಬ್ಬಂದಿಗಳನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗುವುದು, ಪ್ರತಿ ಕೇಂದ್ರಗಳಿಗೆ ಮೆಟಲ್ ಡಿಟಕ್ಟರ್ ಮೂಲಕವೂ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗುವುದು ಎಂದರು.

ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಾತನಾಡಿ, ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ಕೇಂದ್ರದ ಮೇಲ್ವಿಚಾರಕರು ಅಭ್ಯರ್ಥಿಗಳ ವರ್ತನೆಯ ವಿಶ್ಲೇಷಣೆ (ಬಿಹೇವಿಯರ್ ಅನಾಲಿಸಿಸ್) ಮಾಡಬೇಕು, ಈ ಸಂದರ್ಭದಲ್ಲಿ ಅವರಿಂದ ಅನುಚಿತ ವರ್ತನೆಗಳು ಕಂಡುಬಂದಲ್ಲಿ ತಪಾಸಣೆ ಮಾಡಬಹುದು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್ ಮಾತನಾಡಿ, 22 ಮಂದಿ ಮುಖ್ಯ ಅಧೀಕ್ಷಕರು, 22 ಮಂದಿ ಸ್ಥಾನಿಕ ಜಾಗೃತದಳ, 255 ಮೇಲ್ವಿಚಾರಕರು, 37 ಮಂದಿ ರಿಲಿವರ್ಸ್‍ಗಳನ್ನು ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ, ಮುಖ್ಯವಾಗಿ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ.ಟಿ.ವಿ, ಕುಡಿಯುವ ನೀರಿನ ವ್ಯವಸ್ಥೆ, ಹೆಚ್ಚುವರಿ ಕೊಠಡಿ ವ್ಯವಸ್ಥೆ, ವಿಶೇಷ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ, ವಿಡಿಯೋ ಕವರೇಜ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಭ್ಯರ್ಥಿಗಳಿಗೆ ಸೂಚನೆಗಳಿವು:
ಕಪ್ಪು ಅಥವಾ ನೀಲಿ ಬಣ್ಣದ ಬಾಲ್ ಪೆನ್ ಬಳಸಬೇಕು, ಗಣಿತ ಅಭ್ಯರ್ಥಿಗಳು ಮಾತ್ರ ಜಾಮಿಟ್ರಿ ಬಾಕ್ಸ್ ಬಳಸಬಹುದು, ಪ್ರವೇಶ ಪತ್ರದಲ್ಲಿ ನಮೂದಿಸಿರುವ ವಿಷಯದ ಪ್ರಶ್ನೆ ಪತ್ರಿಕೆಯನ್ನು ಉತ್ತರಿಸುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದೊಳಗೆ ಹಾಜರಿರಬೇಕು, ಕೋವಿಡ್-19 ನಿಯಮಾವಳಿಗಳನ್ನು ತಪ್ಪದೇ ಪಾಲಿಸಬೇಕು, ಪ್ರವೇಶ ಪತ್ರವಿಲ್ಲದ ಯಾವುದೇ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಕ್ಯಾಲ್ಕುಲೇಟರ್, ಮೊಬೈಲ್, ಪೇಜರ್, ಬ್ಲೂಟೂತ್ ಹಾಗೂ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಮತ್ತು ಲಾಗ್‍ಟೇಬಲ್, ಬಿಳಿ ಫ್ಲೂಯಿಡ್, ಬೆಂಕಿಪಟ್ಟಣ ಅಥವಾ ಸಿಗರೇಟ್ ಲೈಟರ್ ಮುಂತಾದ ವಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಕಡ್ಡಾಯವಾಗಿ ನಿμÉೀಧಿಸಲಾಗಿದೆ.

ಹುದ್ದೆಗಳ ವಿವರ:
ಆಂಗ್ಲ ಭಾμÉಗೆ-87, ಕನ್ನಡ ಮಾಧ್ಯಮದ ಗಣಿತ ಮತ್ತು ವಿಜ್ಞಾನ-254, ಕನ್ನಡ ಮಾಧ್ಯಮದ ಜೀವಶಾಸ್ತ್ರ–25 ಹಾಗೂ ಕನ್ನಡ ಮಾಧ್ಯಮದ ಸಮಾಜ ಪಾಠಗಳು-209 ಸೇರಿದಂತೆ ಒಟ್ಟಾರೆ-575 ಹುದ್ದೆಗಳ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ನಡೆಯಲಿದೆ.

ಸಹಾಯಕ ಆಯುಕ್ತ ಮದನ್ ಮೋಹನ್ ವೇದಿಕೆಯಲ್ಲಿದ್ದರು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.


Spread the love