ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪತ್ರಿಭಟನೆ

ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪತ್ರಿಭಟನೆ

ಉಡುಪಿ: ಉತ್ತರ ಪ್ರದೇಶದ ಸೋನಭದ್ರಾದ ಆದಿವಾಸಿ ಕುಟುಂಬಗಳನ್ನು ಭೇಟಿ ಮಾಡಲು ಮುಂದಾಗಿದ್ದ ಪ್ರಿಯಾಂಕ ಗಾಂಧಿ ವಾದ್ರಾರನ್ನು ಬಂಧಿಸಿದ ಯೋಗಿ ಆದಿತ್ಯನಾಥ್ ಸರಕಾರದ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ನಾಯಕರಾದ ಕಿರಣ್ ಕುಮಾರ್ ಉದ್ಯಾವರ, ಯತೀಶ್ ಕರ್ಕೇರಾ, ಸರಸು ಡಿ ಬಂಗೇರಾ, ಜನಾರ್ಧನ ಭಂಡಾರ್ಕರ್, ಭಾಸ್ಕರ್ ರಾವ್ ಕಿದಿಯೂರು, ರೆಹಮಾನ್ ಕೊಡವೂರು, ಪ್ರಮೀಳಾ ಜತ್ತನ್ನ ಹಾಗೂ ಇತರರು ಉಪಸ್ಥಿತರಿದ್ದರು.

ಉತ್ತರ ಪ್ರದೇಶದ ಸೋನ್ಭದ್ರ ಜಿಲ್ಲೆಯ ಉಂಭಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗೋಂಡಾ ಸಮುದಾಯದ 10 ಜನರು ಸಾವನ್ನಪ್ಪಿದ್ದರು. ಈ ಸಂತ್ರಸ್ಥ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರಿಯಾಂಕ ಗಾಂಧಿ ಅಲ್ಲಿಗೆ ಹೋಗುತ್ತಿದ್ದಾಗ ಅವರನ್ನೂ ಉತ್ತರ ಪ್ರದೇಶ ಪೊಲೀಸರು ತಡೆದು ಬಂಧಿಸಿದ್ದರು.