ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಬಾಲಕಿ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Spread the love

ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಬಾಲಕಿ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಸುರತ್ಕಲ್: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಪೊಲೀಸರ ಪ್ರಕಾರ, ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ ಅಪ್ರಾಪ್ತ ಬಾಲಕಿಗೆ ಪ್ರೀತಿಯ ನಂಬಿಕೆ ಮೂಡಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ.

ಈ ವಿಚಾರವನ್ನು ಬಾಲಕಿ ಮನೀಶ್‌ಗೆ ತಿಳಿಸಿದಾಗ, ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ತಿರಸ್ಕರಿಸಿದ ಹಿನ್ನೆಲೆ ಬಾಲಕಿ ಜೂ,22ರಂದು ತನ್ನ ತಾಯಿಗೆ ನಡೆದ ವಿಚಾರವನ್ನು ತಿಳಿಸಿದ್ದಳು. ತಾಯಿ ಆಕೆಗೆ ಧೈರ್ಯ ಹೇಳಿ ಸಮಾಧಾನಪಡಿಸಿದ್ದರು. ಆದರೆ ತಾಯಿ ಮರುದಿನ ಮಂಗಳವಾರ ಬೆಳಗ್ಗೆ ಕೆಲಸಕ್ಕೆ ತೆರಳಿ ಹಿಂದಿರುಗಿ ಮನೆಗೆ ಬಂದಾಗ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಬಾಲಕಿಯ ತಾಯಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಆರೋಪಿ ಮನೀಶ್ ಪೂಜಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳು ಹಾಗೂ ಪೊಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


Spread the love
Subscribe
Notify of

0 Comments