ಪ್ರೇಮಿಗಳಿಂದ ಆತ್ಮಹತ್ಯೆಗೆ ಯತ್ನ: ಪ್ರಿಯಕರ ಸಾವು

Spread the love

ಪ್ರೇಮಿಗಳಿಂದ ಆತ್ಮಹತ್ಯೆಗೆ ಯತ್ನ: ಪ್ರಿಯಕರ ಸಾವು

ಚಾಮರಾಜನಗರ: ಪ್ರಸಿದ್ಧ ಪ್ರವಾಸಿ ಕೇಂದ್ರವಾದ ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿ, ಪ್ರಿಯಕರ ಸಾವನ್ನಪ್ಪಿ, ಪ್ರಿಯತಮೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ನಡೆದಿದೆ.

ಕನಕಪುರ ಮೂಲದ  ಉಮೇಶ್(24) ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದರೆ, ಯುವಕನಾಗಿದ್ದು, 16 ವರ್ಷದ ಚಾಮುಂಡಿಪುರದ ಬಾಲಕಿ ಗಂಭೀರ  ಸ್ಥಿತಿಯಲ್ಲಿದ್ದು ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉಮೇಶ್ ಹಾಗೂ ಬಾಲಕಿ ಕನಕಪುರ ಮೂಲದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು ಹೊಗೆನಕಲ್ ಜಲಪಾತದ ಬಂಡೆಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇವರಿಬ್ಬರು ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬಾಲಕಿ ಮತ್ತು ಉಮೇಶ್ನನ್ನು ಚಿಕಿತ್ಸೆಗಾಗಿ ಪೆನ್ನಾಗರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯದಲ್ಲಿಯೇ ಯುವಕ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಧರ್ಮಪುರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೊಗೇನೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


Spread the love

Leave a Reply

Please enter your comment!
Please enter your name here