Home Mangalorean News Kannada News ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

Spread the love

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ನಲ್ಲಿ ಮೇಲ್ಛಾವಣಿ ಕೊರೆದು ಒಳನುಗ್ಗಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ಕಳೆದ ಜುಲೈ 13ರಂದು ಮೇಲ್ಛಾವಣಿ ಕೊರೆದು ಒಳಪ್ರವೇಶಿಸಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಲಾಗಿತ್ತು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 106/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 331(3), 331(4), 305(ಎ) ಹಾಗೂ 62ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ವೇಳೆ ಆರೋಪಿಗಳ ಪೈಕಿ ಬಂಟ್ವಾಳದ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂಬಾತನನ್ನು ಜುಲೈ 22ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.


Spread the love

Exit mobile version