Home Mangalorean News Kannada News ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆಯಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ

ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆಯಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ

Spread the love

ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆಯಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ

ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ, ರಾಷ್ಟ್ರೀಯ ಸೇವಾ ಯೋಜನೆ (NSS), , ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಮಂಗಳೂರು ವಿಶ್ವವಿದ್ಯಾಲಯದ ಕ್ರೈಸ್ತ ಅಧ್ಯಯನ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಪುದು ಇವರ ಸಂಯುಕ್ತ ಸಹಯೋಗದಲ್ಲಿ ವಿಪತ್ತು ನಿರ್ವಹಣಾ ಅಭ್ಯಾಸ ಕಾರ್ಯಕ್ರಮವನ್ನು 22 ಏಪ್ರಿಲ್ 2026 ರಂದು ಬೆಳಿಗ್ಗೆ 10:00 ಗಂಟೆಗೆ DKZP ಸರ್ಕಾರಿ ಪ್ರೌಢಶಾಲೆ, ಸುಜೀರ್, ಪುದು ಇಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಪ್ರಾರ್ಥನೆ ಮತ್ತು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ರೆವ್. ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಪ್ರಾಂಶುಪಾಲೆ ಡಾ. ರೀನಾ ವಿಲ್ಮಾ ಫ್ರಾಂಕ್, ಮಂಗಳೂರು ವಿಶ್ವವಿದ್ಯಾಲಯದ ಕ್ರೈಸ್ತ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಜಾರ್ಜ್ ಸುನಿಲ್ ಡಿಸೋಜಾ, DKZP ಸರ್ಕಾರಿ ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮರ್ ಫಾರೂಕ್, ಪಂಚಾಯತ್ ಉಪಾಧ್ಯಕ್ಷೆ ರುಕ್ಸಾನಾ ಬಾನು ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಅಧಿಕಾರಿ ಶ್ರೀ ಪ್ರವೀಣ್ ಕೆ.ಎನ್ ಉಪಸ್ಥಿತರಿದ್ದರು. ವಿಪತ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ಮುಖ್ಯಸ್ಥರು ಡಾ. ಎಡ್ವೀನಾ ಫಿಲಿಪ್ ಮೊನಿಸ್ ಅವರು ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮವನ್ನು ಸ್ನೇಹಾ ಹಾಗೂ ಲೀನಾ ಜೋಶಿ ನಿರೂಪಿಸಿದರು. ರಿಶೆಲ್ ಪಿಂಟೋ ಅವರು ಧನ್ಯವಾದ ಸಲ್ಲಿಸಿದರು.

ಮುಖ್ಯ ಅತಿಥಿ ರೆವ್. ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಅವರು ವಿಪತ್ತು ನಿರ್ವಹಣೆಯಲ್ಲಿ ಜಾಗೃತಿ ಮತ್ತು ಸಿದ್ಧತೆಯ ಅಗತ್ಯತೆಯನ್ನು ಒತ್ತಿಹೇಳಿದರು. ರೆವ್. ಡಾ. ಜಾರ್ಜ್ ಸುನಿಲ್ ಡಿಸೋಜಾ ಅವರು ವಿಪತ್ತು ಸಂದರ್ಭಗಳಲ್ಲಿ ಮಾನಸಿಕ ನಿಯಂತ್ರಣದ ಮಹತ್ವವನ್ನು ವಿವರಿಸಿ, ಭಯ ಮತ್ತು ಗೊಂದಲದ ನಡುವೆಯೂ ಶಾಂತವಾಗಿ ಯೋಚಿಸುವುದು ಅಗತ್ಯವೆಂದರು.

ಅಗ್ನಿಶಾಮಕ ಅಧಿಕಾರಿ ಶ್ರೀ ಪ್ರವೀಣ್ ಕೆ.ಎನ್ ಅವರು ಅಗ್ನಿ ಅವಘಡಗಳು, ರಸ್ತೆ ಅಪಘಾತಗಳು ಹಾಗೂ ರಕ್ಷಣಾ ಕಾರ್ಯಾಚರಣೆಗಳಲ್ಲಿ ಅಗ್ನಿಶಾಮಕ ದಳದ ಪಾತ್ರವನ್ನು ವಿವರಿಸಿದರು. ಅಗ್ನಿ ಉಂಟಾಗುವ ಕಾರಣಗಳು, ತಡೆಗಟ್ಟುವ ವಿಧಾನಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಅಗ್ನಿಶಾಮಕ ಉಪಕರಣಗಳ ಬಳಕೆಯ ಬಗ್ಗೆ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು.

ಪಾಂಡೇಶ್ವರ ಅಗ್ನಿಶಾಮಕ ದಳದ ಶ್ರೀ ಪ್ರವೀಣ್, ಹರೀಶ್ ಕೆ.ಟಿ., ಸತೀಶ್ ಕುಮಾರ್, ಚರಣ್ ಪಾಟಗಾರ್, ಜಂಟಿ ಚೌಹಾನ್ ಹಾಗೂ ಧರ್ಮ ಎಂ. ಅವರ ತಂಡದಿಂದ ಅಣುಕು ಅಭ್ಯಾಸನಡೆಸಲಾಯಿತು.

ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಆಟೋ ಚಾಲಕರು, ಪಂಚಾಯತ್ ಪ್ರತಿನಿಧಿಗಳು, ಸ್ಥಳೀಯ ನಿವಾಸಿಗಳು, ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಾಲೆಯ ಸಿಬ್ಬಂದಿ ಸೇರಿದಂತೆ ಒಟ್ಟು 100 ಮಂದಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಡಾ. ಎಡ್ವೀನಾ ಫಿಲಿಪ್ ಮೊನಿಸ್ (ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗದ ಮುಖ್ಯಸ್ಥರು), ಶ್ರೀಮತಿ ಅಂಬಿಲಿ ವಿ. ವಿಜಯಕುಮಾರ್, ಯಶಸ್ವಿನಿ ಹಾಗೂ ರಾಯ್ಸ್ಟನ್ ಡಿಸಿಲ್ವಾ ಅವರ ನೇತೃತ್ವದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಭಾಗವಹಿಸಿದವರು ತರಬೇತಿಯಿಂದ ತೃಪ್ತಿ ವ್ಯಕ್ತಪಡಿಸಿ, ತುರ್ತು ಸಂದರ್ಭಗಳಲ್ಲಿ ಕೌಶಲ್ಯಗಳನ್ನು ಬಳಕೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version