ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು, ದೇರಳಕಟ್ಟೆಯಲ್ಲಿ ವೈದ್ಯರ ದಿನಾಚರಣೆ

Spread the love

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು, ದೇರಳಕಟ್ಟೆಯಲ್ಲಿ ವೈದ್ಯರ ದಿನಾಚರಣೆ

ಮಂಗಳೂರು: ಡಾ॥ ಬಿ.ಸಿ.ರಾಯ್ ರವರ ಜನ್ಮದಿನದ ಅಂಗವಾಗಿ ವೈದ್ಯರ ದಿನಾಚರಣೆಯನ್ನು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು, ದೇರಳಕಟ್ಟೆಯಲ್ಲಿ ಆಚರಿಸಲಾಯಿತು.

ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ, ಸಂಸ್ಥೆಯ ಆಡಳಿತಾಧಿಕಾರಿಯಾದ ವಂದನೀಯ ಫಾದರ್ ರೋಶನ್ ಕ್ರಾಸ್ತಾ, ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಜೆ.ಬಿ. ಕ್ರಾಸ್ತಾ, ಕಾಲೇಜಿನ ಪ್ರಾಂಶುಪಾಲರಾದ ಡಾ॥ ಇ ಎಸ್ ಜೆ ಪ್ರಭುಕಿರಣ್, ಉಪಪ್ರಾಂಶುಪಾಲರಾದ ಡಾ॥ ವಿಲ್ಮ ಮೀರ ಡಿಸೋಜ, ಕಾರ್ಯಕ್ರಮದ ಸಂಯೋಜಕರಾದ ಡಾ॥ ಜೋಸ್ನಾ ಶಿವಪ್ರಸಾದ್‍ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫಾದರ್ ರಿಚರ್ಡ್ ಕುವೆಲ್ಲೊರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿಯಾದ ವಂದನೀಯ ಫಾದರ್ ರೋಶನ್ ಕ್ರಾಸ್ತಾರವರು ತಮ್ಮ ಸ್ವಾಗತ ಭಾಷಣದಲ್ಲಿ ಎಲ್ಲಾ ವೈದ್ಯರಿಗೂ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಫಾರೆನ್ಸಿಕ್ ಮೆಡಿಸಿನ್ ಹಾಗೂ ಟಾಕ್ಸಿಕಾಲಜಿ (ವಿಧಿವಿಜ್ಞಾನ ಹಾಗೂ ವಿಷಶಾಸ್ತ್ರ) ವಿಭಾಗದ ಮುಖ್ಯಸ್ಥೆಯಾದ ಡಾ॥ ಮೆಡೊನ್ಹಾ ಜೋಸೆಫ್ ಅವರು ಸಂಸ್ಥೆಗೆ ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ತದನಂತರ ಡಾ॥ ಮೆಡೊನ್ಹಾ ಜೋಸೆಫ್‍ರವರು ಈ ಸಂಸ್ಥೆಯೊಂದಿಗೆ ಇರುವ ಸುಧೀರ್ಘ ಬಾಂಧವ್ಯದ ತಮ್ಮ ಅನುಭವವನ್ನು ಹಂಚಿಕೊಂಡರು. ಹಾಗೆಯೇ ಈ ಸಂಸ್ಥೆಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಜೆ.ಬಿ. ಕ್ರಾಸ್ತಾರವರಿಗೂ ತಾವು ಸಲ್ಲಿಸಿರುವ ಸೇವೆಗಾಗಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ವಂದನೀಯ ಫಾದರ್ ರಿಚಾರ್ಡ್ ಕುವೆಲ್ಲೊರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಂಸ್ಥೆಗೆ ಹಾಗೂ ಕೊರೊನಾ ಮಾಹಾಮಾರಿಯನ್ನು ಎದುರಿಸುವಲ್ಲಿ ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಪ್ರಶಂಸಿಸಿ ವೈದ್ಯರನ್ನು ಹಾಗೂ ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದ ಸಂಯೋಜಕರಾದ ಡಾ ಜೋಸ್ನಾ ಶಿವಪ್ರಸಾದ್‍ರವರು ಧನ್ಯವಾದಗಳನ್ನು ಸಮರ್ಪಿಸಿದರು.

ಯೂಟ್ಯೂಬ್‍ನಲ್ಲಿ ನೇರಪ್ರಸಾರದ ಮೂಲಕ ಕಾರ್ಯಕ್ರಮದ ವೀಕ್ಷಣೆಗೆ ಎಲ್ಲರಿಗೂ ಅವಕಾಶ ಕಲ್ಪಿಸಲಾಯಿತು.


Spread the love