ಫಾ|ಮಹೇಶ್ ಡಿಸೋಜಾ ಆತ್ಮಹತ್ಯೆ : ಮುದರಂಗಡಿ ಗ್ರಾಪಂ. ಅಧ್ಯಕ್ಷ ಡೆವೀಡ್ ಡಿಸೋಜಾ ಬಂಧನ

ಫಾ|ಮಹೇಶ್ ಡಿಸೋಜಾ ಆತ್ಮಹತ್ಯೆ : ಮುದರಂಗಡಿ ಗ್ರಾಪಂ. ಅಧ್ಯಕ್ಷ ಡೇವಿಡ್ ಡಿಸೋಜಾ ಬಂಧನ

ಉಡುಪಿ: ಶಿರ್ವ ಡೋನ್ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂ|ಮಹೇಶ್ ಡಿಸೋಜಾರ ಆತ್ಮಹತ್ಯೆ ವಿಚಾರದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ ಮಾತಾನಾಡಿ ಫಾ|ಮಹೇಶ್ ಡಿಸೋಜಾರಿಗೆ ಆತ್ಮಹತ್ಯೆಗೆ ದುಷ್ಪಪ್ರೇರಣೆ ನೀಡಿದ ಆರೋಪದ ಮೇಲೆ ಬುಧವಾರ ಬಂಧಿಸಿದ್ದು, ಆರೋಪಿಯನ್ನು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಮಾರ್ಚ್ 11 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.