ಫೆಬ್ರವರಿ 7 ರಂದು ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ಉಪ ಮುಖ್ಯ ಮಂತ್ರಿಗಳಿಂದ ಶಂಕು ಸ್ಥಾಪನೆ

Spread the love

ಫೆಬ್ರವರಿ 7 ರಂದು ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ಉಪ ಮುಖ್ಯ ಮಂತ್ರಿಗಳಿಂದ ಶಂಕು ಸ್ಥಾಪನೆ

ಮಂಗಳೂರು: ಲೋಕೋಪಯೋಗಿ ಇಲಾಖೆ ವತಿಯಿಂದ ಮಂಗಳೂರು ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ನಂ. 67 ರ ಕಿ.ಮೀ 12.98 ದಿಂದ ಕಿ.ಮೀ 14.80 ರ ವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಅಂದಾಜು ಮೊತ್ತ ರೂ. 50.00 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆಯ ಕಾಮಗಾರಿಯ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ಫೆಬ್ರವರಿ 7 ರಂದು ಸಂಜೆ 5 ಕ್ಕೆ ಮಂಗಳೂರಿನ ಬಜಪೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಉಪ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ರವರು ಹಾಗೂ ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್. ಘನ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಎ. ಕೋಟ್ಯಾನ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉತ್ತರ ವಿಧಾನ ಸಭಾ ಶಾಸಕ ಡಾ. ಭರತ್ ಶೆಟ್ಟಿ ವೈ., ದಕ್ಷಿಣ ವಿಧಾನ ಸಭಾ ಶಾಸಕ ಡಿ. ವೇದವ್ಯಾಸ್ ಕಾಮತ್, ಕರ್ನಾಟಕ ವಿಧಾನ ಪರಿಷತ್‍ನ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ಶಾಸಕ ಬಿ. ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್. ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್, ಮಂಗಳೂರು ವಿಧಾನ ಸಭಾ ಶಾಸಕ ಯು.ಟಿ ಖಾದರ್, ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಉಪಸ್ಥಿತರಿರುವರು.


Spread the love