ಫೆ.15ರಂದು ಸುಬ್ರಹ್ಮಣ್ಯದಲ್ಲಿ  ಉದ್ಯೋಗ ಮೇಳ

Spread the love

ಫೆ.15ರಂದು ಸುಬ್ರಹ್ಮಣ್ಯದಲ್ಲಿ  ಉದ್ಯೋಗ ಮೇಳ

ಮಂಗಳೂರು : ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಕೆ.ಎಸ್.ಎಸ್. ಕಾಲೇಜು, ಸುಬ್ರಹ್ಮಣ್ಯ ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 15 ರಂದು ಬೆಳಿಗ್ಗೆ 9.30 ರಿಂದ “ಉದ್ಯೋಗ ಮೇಳ”ವನ್ನು  ಕೆ.ಎಸ್.ಎಸ್. ಕಾಲೇಜು, ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕಡಬ ತಾಲೂಕು ಇಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸುಮಾರು 25ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿರುವರು. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಪದವಿ, ಡಿ.ಫಾರ್ಮ, ಬಿ. ಫಾರ್ಮ, ಸ್ನಾತಕೋತ್ತರ ವಿದ್ಯಾರ್ಹತೆ ಮತ್ತು ಡ್ರೈವರ್ ಆಗಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗ ಮೇಳ ನಡೆಯುವ ಸ್ಥಳ : ಕೆ.ಎಸ್.ಎಸ್. ಕಾಲೇಜು  ಕುಕ್ಕೆ ಶ್ರೀ ಸುಬ್ರಹ್ಮಣ್ಯ,  ಕಡಬ ತಾಲೂಕು, ದ.ಕ. ಸಮಯ : ಬೆಳಿಗ್ಗೆ 9.30 ರಿಂದ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0824-2457139 ಹಾಗೂ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


Spread the love