ಫೆ.19ರವರೆಗೆ ನಗರ‌ ಪೊಲೀಸ್‌ ಕಮೀಷನರೇಟ್‌  ವ್ಯಾಪ್ತಿಯಲ್ಲಿ  ಶಾಲಾ-ಕಾಲೇಜಿನ ಸುತ್ತಮುತ್ತ ಸೆಕ್ಷನ್ 144 ಜಾರಿ

Spread the love

ಫೆ.19ರವರೆಗೆ ನಗರ‌ ಪೊಲೀಸ್‌ ಕಮೀಷನರೇಟ್‌  ವ್ಯಾಪ್ತಿಯಲ್ಲಿ  ಶಾಲಾ-ಕಾಲೇಜಿನ ಸುತ್ತಮುತ್ತ ಸೆಕ್ಷನ್ 144 ಜಾರಿ
 

ಮಂಗಳೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಫೆ.14ರ ಮುಂಜಾನೆ 6ರಿಂದ ಫೆ.19ರ ಸಂಜೆ 6 ಗಂಟೆಯವರೆಗೆ ದ.ಕ.ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್‌ನೊಳಗೆ ಸೆ.144 ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್‌ ಕಮೀಷನರ್‌ ಎನ್‌ ಶಶಿಕುಮಾರ್ಆ‌ ದೇಶ ಹೊರಡಿಸಿದ್ದಾರೆ.

ಕಾನೂನು ಭಂಗ ಮಾಡುವ ಉದ್ದೇಶದಿಂದ ಶಾಲಾ ಕಾಲೇಜಿನ 200 ಮೀಟರ್ ಸುತ್ತಮುತ್ತಲು 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ, ಮೆರವಣಿಗೆ, ಸಭೆ ನಡೆಸುವಂತಿಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ,ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಅದಕ್ಕೆ ಪೂರಕವಾದ ಯಾವುದೇ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ.

ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಕಮೀಷನರ್ ಸ್ಷಷ್ಟಪಡಿಸಿದ್ದಾರೆ.


Spread the love