ಫೆ. 19: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆ

Spread the love

ಫೆ. 19: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆ

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆ ಫೆಬ್ರವರಿ 19 ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಬೈಂದೂರು ಯಡ್ತರೆ ಬೈಪಾಸ್ ಬಳಿ, 11.30ಕ್ಕೆ ನಾಗೂರು ರಾಷ್ಟ್ರೀಯ ಹೆದ್ದಾರಿ ಬಳಿ, ಮಧ್ಯಾಹ್ನ 3 ಗಂಟೆಗೆ ವಂಡ್ಸೆ ಹಾಗೂ ಸಂಜೆ 5 ಗಂಟೆಗೆ ಸಿದ್ದಾಪುರದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿಗಳು ಹಾಗೂ ಉಸ್ತುವಾರಿಗಳಾದ ರೋಜಿ ಜಾನ್, ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದ ಪೋಷಕರಾದ ಮಾಜಿ ಸಚಿವ ಆರ್ ವಿ ದೇಶ್ ಪಾಂಡೆ, ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ ಕೆ ಹರಿಪ್ರಸಾದ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ರವರು ಹಾಗೂ ಜಿಲ್ಲೆಯ ಮಾಜಿ ಶಾಸಕರುಗಳೂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಹಸಂಚಾಲಕರಾದ ಮಂಜುನಾಥ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love