ಫೆ. 3-4 : ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವೆ ಡಾ|ಜಯಮಾಲಾ ಪ್ರವಾಸ

Spread the love

ಫೆ. 3-4 : ಉಡುಪಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವೆ ಡಾ|ಜಯಮಾಲಾ ಪ್ರವಾಸ

ಉಡುಪಿ: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಫೆಬ್ರವರಿ 3 ಮತ್ತು 4 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆಬ್ರವರಿ 3 ರಂದು ಬೆಳಿಗ್ಗೆ 10.30 ಕ್ಕೆ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಗಳೊಡನೆ ಜಿಲ್ಲೆಯಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ, ಮಧ್ಯಾಹ್ನ 2 ಕ್ಕೆ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಮಹಾ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಉಡುಪಿ ಸಕ್ರ್ಯೂಟ್ ಹೌಸ್ನಲ್ಲಿ ವಾಸ್ತವ್ಯ.

ಫೆಬ್ರವರಿ 4 ರಂದು ಬೆಳಗ್ಗೆ 10 ಕ್ಕೆ ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಟ್ಟಿಯಂಗಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ, 11 ಕ್ಕೆ ಬೈಂದೂರು ಕ್ಷೇತ್ರ ವ್ಯಾಪ್ತಿಯ ಕೆರಾಡಿಯಲ್ಲಿ ಎ.ಎನ್.ಎಮ್ ಸೆಂಟರ್ ಉದ್ಘಾಟನೆ, ಮಧ್ಯಾಹ್ನ 12 ಕ್ಕೆ ಬೈಂದೂರು ಕ್ಷೇತ್ರ ವ್ಯಾಪ್ತಿಯ ತ್ರಾಸಿಯಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.


Spread the love