ಫೆ. 5: ಶಿರ್ವ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ

Spread the love

ಫೆ. 5: ಶಿರ್ವ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ

ಉಡುಪಿ: ಶಿರ್ವ ಗ್ರಾಮೀಣ ಕಾಂಗ್ರೆಸ್ ಇದರ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಫೆಬ್ರವರಿ 5 ರ ಭಾನುವಾರ ಮಧ್ಯಾಹ್ನ 3.30 ಕ್ಕೆ ಶಿರ್ವ ಮೋನಿಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಪದಗ್ರಹಣವನ್ನು ನೆರವೇರಿಸಲಿದ್ದು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ,ಕೆಪಿಸಿಸಿ ವೀಕ್ಷಕರಾದ ನವೀನ್ ಚಂದ್ರ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಡಾ|ದೇವಿಪ್ರಸಾದ್ ಶೆಟ್ಟಿ ಹಾಗೂ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದು ಗ್ರಾಮೀಣ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷರಾದ ಮೆಲ್ವಿನ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love