ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ

Spread the love

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ

ಉಡುಪಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಉಡುಪಿಯಲ್ಲಿ ಧಾರಾಕಾರ ಮಳೆಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು, ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿಯ ಬೈಂದೂರು, ಕಾಪು, ಕಾರ್ಕಳ ತಾಲೂಕಿನಲ್ಲಿ ಇಂದು ಮುಂಜಾನೆಯಿಂದ ಗುಡುಗು ಸಹಿತ ಮಳೆ ಸುರಿದಿದೆ.

ರಾಜ್ಯದ ಕೆಲವೆಡೆ ಭಾರೀ ಗಾಳಿ, ಮಳೆಯ ಮುನ್ಸೂಚನೆ ಇದ್ದು ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದಿಂದ ಮುನ್ನೆಚ್ಚರಿಕೆ ನೀಡಲಾಗಿದೆ.

ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ಅಂಫಾನ್ ಎಂದು ಹೆಸರಿಡಲಾಗಿದೆ. ಇದು ಪ್ರಸ್ತುತ ಋತುವಿನ ಮೊದಲ ಚಂಡ ಮಾರುತವಾಗಲಿದೆ.

ವಾಯುಭಾರ ಕುಸಿತದಿಂದ ಬಂಗಾಳ ಕೊಲ್ಲಿಯ ಆಗ್ನೇಯ ಭಾಗ, ಅಂಡಮಾನ್, ನಿಕೋಬಾರ್ ದ್ವೀಪ ಹಾಗೂ ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರಿ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.


Spread the love