ಬಂಟರ ಮಾತೃ ಸಂಘ: ಮಂಗಳೂರು ತಾಲೂಕು ಸಮಿತಿ ಸಂಚಾಲಕರಾಗಿ ವಸಂತ ಶೆಟ್ಟಿ ಆಯ್ಕೆ

Spread the love

ಬಂಟರ ಮಾತೃ ಸಂಘ: ಮಂಗಳೂರು ತಾಲೂಕು ಸಮಿತಿ ಸಂಚಾಲಕರಾಗಿ ವಸಂತ ಶೆಟ್ಟಿ ಆಯ್ಕೆ
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಸಂಚಾಲಕರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮಂಗಳೂರು ತಾಲೂಕು ಸಮಿತಿಯ ಸಭೆ ಬಂಟ್ಸ್ ಹಾಸ್ಟೇಲ್ ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆಯಿತು.
ಬಳಿಕ ೨೦೨೩ – ೨೦೨೬ ರ ಸಾಲಿನ ಮಂಗಳೂರು ತಾಲೂಕು ಸಮಿತಿಗೆ ಸಂಚಾಲಕ ಮತ್ತು ಉಪ ಸಂಚಾಲಕರ ಆಯ್ಕೆ ನಡೆಯಿತು. ಸಂಚಾಲಕರಾಗಿ ವಸಂತ ಶೆಟ್ಟಿ ಹಾಗೂ ಉಪ ಸಂಚಾಲಕರಾಗಿ ರತ್ನಾಕರ ಶೆಟ್ಟಿ ಎಕ್ಕಾರ್ ಆಯ್ಕೆಯಾದರು.
ವಸಂತ ಶೆಟ್ಟಿ ಅವರು  ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಹಿರಿಯ ವ್ಯವಸ್ಥಾಪಕರಾಗಿ ನಿವೃತ್ತಿ ಹೊಂದಿದ್ದು ತದನಂತರ ಬಂಟರ ಯಾನೆ ನಾಡವರ ಮಾತೃಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮೂರು ವರ್ಷ ಸಮಾಜ ಸೇವೆ ಮತ್ತು ಈಗಲು ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುತ್ತಾರೆ. ಪ್ರಸ್ತುತ ವಸಂತ ಶೆಟ್ಟಿಯವರು ಬೋಳಾರ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾಪನ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಸಹ ಸಂಚಾಲಕ ರತ್ನಾಕರ ಶೆಟ್ಟಿ ಅವರು ಎಕ್ಕಾರ್ ಬಂಟರ ಸಂಘದ ಅಧ್ಯಕ್ಷರಾಗಿದ್ದಾರೆ. ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಜನರಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಬಂಟರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ.
ಸಭೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ರಾಮ್ ಮೋಹನ್ ರೈ, ಮಾಜೀ ಸಂಚಾಲಕ ಉಲ್ಲಾಸ್ ಶೆಟ್ಟಿ ಪೆರ್ಮುದೆ, ಮಾಜೀ ಸಹ ಸಂಚಾಲಕ ಮುರಳೀಧರ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ ಶೆಟ್ಟಿ, ಸುಂದರ ಶೆಟ್ಟಿ, ಕೃಷ್ಣಪ್ರಸಾದ್ ರೈ, ರವೀಂದ್ರನಾಥ ಶೆಟ್ಟಿ, ಜಯರಾಮ ಸಾಂತಾ, ಕೇಶವ ಮಾರ್ಲ, ಉಮೇಶ್ ರೈ ಪದವುಮೇಗಿನ ಮನೆ, ಸಚ್ಚಿದಾನಂದ ರೈ, ಆನಂದ ಶೆಟ್ಟಿ ಕಾವೂರು, ಜೀವನ್ ಶೆಟ್ಟಿ ಮುಲ್ಕಿ, ಸಬಿತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ದಿವಾಕರ ಸಾಮಾನಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

Spread the love

Leave a Reply

Please enter your comment!
Please enter your name here