ಬಂಟ್ವಾಳ: ಇನ್‌ ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಬಾಲಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ; ಕೇಸು

Spread the love

ಬಂಟ್ವಾಳ: ಇನ್‌ ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಬಾಲಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ; ಕೇಸು
 

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಇನ್‌ ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಬಾಲಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬಾಲಕಿಯು ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿದ್ದು, ಆಕೆಗೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಇನ್‌ಸ್ಟಾ ಗ್ರಾಮ್‌ ಮೂಲಕ ಪರಿಚಯವಾಗಿದ್ದು, ಬಳಿಕ ಆತ ಬಾಲಕಿಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದ.

ಅದೇ ರೀತಿ ಆತ ಡಿ. 2ರಂದು ರಾತ್ರಿ 8.30ರ ಸುಮಾರಿಗೆ ಆಕೆಯ ಮನೆಗೆ ಬಂದು ಆಕೆಯನ್ನು ಸ್ಕೂಟರ್‌ನಲ್ಲಿ ಕರೆದೊಯ್ದು ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ.

ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬಾಲಕನನ್ನು ರಿಮಾಂಡ್‌ ಹೋಮ್‌ಗೆ ದಾಖಲಿಸಲಾಗಿದೆ.


Spread the love