
Spread the love
ಬಂಟ್ವಾಳ: ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಬೆಂಕಿ ಆಕಸ್ಮಿಕ
ಬಂಟ್ವಾಳ: ಇಲೆಕ್ಟ್ರಾನಿಕ್ಸ್ ಮಳಿಗೆಯ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಮೀಪ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿರುವ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಟ್ಟಡದ 2 ನೇ ಮಹಡಿಯಲ್ಲಿ ಸುಮಾರು ಅಂದಾಜು 1,50 ಕೋಟಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ 2ನೇ ಮಹಡಿಯ ಕಟ್ಟಡಕ್ಕೆ ಹಾಕಿರುವ ಶೀಟ್ ನ ಛಾವಣಿ ಕೂಡ ಹಾನಿಯಾಗಿದ್ದು ಸುಮಾರು ಅಂದಾಜು 40 ಲಕ್ಷ ರೂ ಮೌಲ್ಯದಷ್ಟು ಹಾನಿಯಾಗಿರುತ್ತದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಸಾರ್ವಜನಿಕರು ಸಹಕರಿಸಿದರು.
ಬಂಟ್ವಾಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
Spread the love