Home Mangalorean News Kannada News ಬಂಟ್ವಾಳ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರಾಯಿ ನಿವಾಸಿಯ ಮೃತದೇಹ ಪತ್ತೆ

ಬಂಟ್ವಾಳ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರಾಯಿ ನಿವಾಸಿಯ ಮೃತದೇಹ ಪತ್ತೆ

Spread the love

ಬಂಟ್ವಾಳ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರಾಯಿ ನಿವಾಸಿಯ ಮೃತದೇಹ ಪತ್ತೆ

ಬಂಟ್ವಾಳ : ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಅವರ ಶವ ಅರಳ ಗ್ರಾಮದ ಪಂಬದಗಡ್ಡೆ ಎಂಬಲ್ಲಿ ಪತ್ತೆಯಾಗಿದೆ.

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ ರಾತ್ರಿ ಮನೆ ಸಮೀಪ ತುಂಬಿ ಹರಿಯುತ್ತಿರುವ ಹಳ್ಳದ ಬಳಿ ಕಂಡುಬಂದಿತ್ತು. ಜೀವನ್ ಪಿಂಟೊ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ಶೋಧ ಕಾರ್ಯ ನಡೆಯುತ್ತಿತ್ತು. ಇದೀಗ ಅವರ ಮೃತದೇಹ ಪತ್ತೆಯಾಗಿದೆ.

ಶನಿವಾರ ರಾತ್ರಿ ಸಂಭವಿಸಿದ ಘಟನೆಯ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಮಳೆ ಹಾಗೂ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್‌ಡಿಆರ್‌ಎಫ್ ತಂಡ ಮಾಹಿತಿ ನೀಡಿದೆ.

ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ಕುರಿತು ಕುರಿತು ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


Spread the love

Exit mobile version