ಬಂಟ್ವಾಳ | ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ವಾಹನ ವಶಕ್ಕೆ

Spread the love

ಬಂಟ್ವಾಳ | ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ವಾಹನ ವಶಕ್ಕೆ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವಾಗಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ 21-03-2026 ರಂದು ಪರ್ಲಿಯಾ ಪ್ರದೇಶದ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವುಗೊಂಡಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 37/2026, ಕಲಂ 303(2) BNS 2023ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಕಳವು ಮಾಡಿದ್ದ ಅಂದಾಜು ₹50,000 ಮೌಲ್ಯದ ಸ್ಕೂಟರ್ ಅನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments