ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ಯುವಕ ಮೃತ್ಯು

Spread the love

ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ಯುವಕ ಮೃತ್ಯು
 

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ (ಜ.12) ಬೆಳಿಗ್ಗೆ ನಡೆದಿದೆ.

ತಾಲೂಕಿನ ಸಜೀಪ ನಿವಾಸಿ ರಾಜೇಶ್‌ ಪೂಜಾರಿ ಸ್ಥಾನದ ಮನೆ ಎಂದು ತಿಳಿದು ಬಂದಿದೆ. ರಾಜೇಶ್ ಪೂಜಾರಿ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.


ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿ ಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ. ಆ ಬಳಿಕ ಸಾರ್ವಜನಿಕರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.

ರಾಜೇಶ್ ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿ ಚಕ್ರ ವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.

ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೊಲಿಸರು ತನಿಖೆ ಆರಂಭಿಸಿದ್ದಾರೆ.

ರಾಜೇಶ್‌ ಸಾವಿಗೆ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.


Spread the love

Leave a Reply

Please enter your comment!
Please enter your name here