ಬಂಟ್ವಾಳ | ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ಬಾಲಕ ಮೃತ್ಯು

Spread the love

ಬಂಟ್ವಾಳ | ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ಬಾಲಕ ಮೃತ್ಯು

ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಹಣೆ ಎಂಬಲ್ಲಿ ನಡೆದಿದೆ.

ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. (14) ಮೃತಪಟ್ಟ ಬಾಲಕ. ಈತ ಸ್ಥಳೀಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ.

ನ.14ರಂದು ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸುಚಿನ್ ಬೈಕ್ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದಾಗ ಕಲ್ಪನೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸುಚಿನ್ ನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.15ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿದ್ದಾರೆ.


Spread the love
Subscribe
Notify of

0 Comments