ಬಂಟ್ವಾಳ| ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ: ಮತ್ತೊಂದು ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

Spread the love

ಬಂಟ್ವಾಳ| ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ: ಮತ್ತೊಂದು ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ಸಜಿಪನಡು ಗ್ರಾಮದ ದೇರಾಜೆಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮತ್ತೊಂದು ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

Gadinadadhwani ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 80/2025, ಕಲಂ 240 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love