ಬಂಟ ಸಮುದಾಯದ ಬೇಡಿಕೆಗಳಿಗೆ ಮುಖ್ಯಮಂತ್ರಿ ಸ್ಪಂದನೆ

Spread the love

ಬಂಟ ಸಮುದಾಯದ ಬೇಡಿಕೆಗಳಿಗೆ ಮುಖ್ಯಮಂತ್ರಿ ಸ್ಪಂದನೆ
ಮಂಗಳೂರು: ಬಂಟ ಸಮುದಾಯದ ಬಹುತೇಕ ಬೇಡಿಕೆಗಳ ಈಡೇರಿಕೆಯ ದಿಸೆಯಲ್ಲಿ ಮುಖ್ಯಮಂತ್ರಿ  ಬಸವರಾಜ ಮೊಮ್ಮಾಯಿ  ಸಕಾರಾತ್ಮಕ ಸ್ಪಂದಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರನ್ನು ಮುಖ್ಯಮಂತ್ರಿಗಳು ಬೆಂಗಳೂರಿನ ತನ್ನ ಗೃಹ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಕೂಲಂಕುಶವಾಗಿ ಮಾತುಕತೆ ನಡೆಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನು ಬಿಡುಗಡೆಗೊಳಿಸಿದರು.
ಬಂಟ ಸಮುದಾಯವನ್ನು ೨ಎ ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿರುವ ಮುಖ್ಯಮಂತ್ರಿಗಳು ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ.
ಒಕ್ಕೂಟದ ಅಧ್ಯಕ್ಷರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮುಖ್ಯಮಂತ್ರಿಗಳಿಗೆ ಮನದಟ್ಟು ಮಾಡುವ ಮೂಲಕ  ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಯ ಅವಶ್ಯಕತೆ ಮನಗಂಡು ಅವರು  ಬಂಟ ನಾಡವರ ನಿಗಮ ಸ್ಥಾಪನೆಗೆ  ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳು ಬಲವನ್ನು ತುಂಬಿದ್ದಾರೆ ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಒಕ್ಕೂಟದ ಅಧ್ಯಕ್ಷರು ತಿಳಿಸಿದ್ದಾರೆ.
ದ. ಕ. ಸಂಸದರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮುಂಬೈ ಸಂಸದ ಗೋಪಾಲ ಶೆಟ್ಟಿ ಹಾಗೂ ಎಲ್ಲಾ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳಿಗೆ, ಬಂಟ ಮುಖಂಡರುಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಭೇಟಿ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಮೊದಲಾದವರಿದ್ದರು.


Spread the love

Leave a Reply

Please enter your comment!
Please enter your name here