ಬಕ್ರೀದ್ ಹಬ್ಬದಲ್ಲಿ ಪ್ರಾಣಿಗಳ ಅಕ್ರಮ ಸಾಗಾಣಿಕೆ ಹಾಗೂ ವಧೆ ತಡೆಗಟ್ಟಲು ಅಧಿಕಾರಿಗಳಿಗೆ ಉಡುಪಿ ಜಿಲ್ಲಾಡಳಿತ ಸೂಚನೆ

Spread the love

ಬಕ್ರೀದ್ ಹಬ್ಬದಲ್ಲಿ ಪ್ರಾಣಿಗಳ ಅಕ್ರಮ ಸಾಗಾಣಿಕೆ ಹಾಗೂ ವಧೆ ತಡೆಗಟ್ಟಲು ಅಧಿಕಾರಿಗಳಿಗೆ ಉಡುಪಿ ಜಿಲ್ಲಾಡಳಿತ ಸೂಚನೆ

ಉಡುಪಿ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ತಡೆಗಟ್ಟುವ ಸಂಬಂಧ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅಧ್ಯಕ್ಷತೆಯಲ್ಲಿ ಆಗಸ್ಟ್ 18 ರಂದು ಸಭೆ ನಡೆಯಿತು.

ಸರ್ಕಾರದ ಆದೇಶದಂತೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಇಲಾಖೆ, ನಗರಸಭೆ, ಸಾರಿಗೆ ಅಧಿಕಾರಿ ಮತ್ತು ಪಶುಪಾಲನಾ ಮತ್ತು ಪಶುವೈದೈಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಕಾನೂನನ್ನು ಉಲ್ಲಂಘಿಸಿ ಅಕ್ರಮವಾಗಿ ಅಥವಾ ಅನಧೀಕೃತವಾಗಿ ಪ್ರಾಣಿಗಳನ್ನು ಸಾಗಾಣಿಕೆ ಮಾಡುತ್ತಿದ್ದಲ್ಲಿ ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಳ್ಳದೆ, ಹತ್ತಿರದ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.
ತಾಲೂಕಿನ ತಹಶೀಲ್ದಾರರು ಅಗತ್ಯವಿದ್ದಲ್ಲಿ ಶಾಂತಿ ಸಭೆಗಳನ್ನು ನಡೆಸಿ, ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತೌಆಗಿ ಆಚರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ ಅಪರ ಜಿಲಾಧಿಕಾರಿ, ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಲು , ಹತ್ತಿರದ ಗೋಶಾಲೆಗೆ ಬಿಡಲು ಮತ್ತು ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಲು ಪಶುವೈದ್ಯಾಧಿಕಾರಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love