ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ಬಂಧನ – ಬಜರಂಗದಳ ಖಂಡನೆ

Spread the love

ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ಬಂಧನ – ಬಜರಂಗದಳ ಖಂಡನೆ

ಮಂಗಳೂರು: ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದಾರೆ, ಕಾಂಗ್ರೆಸ್ ಸರಕಾರವು ಪೊಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲವಂತಹ ಕೆಲಸ ಮಾಡುತ್ತಿದೆ. ಈ ದೇಶದ್ರೋಹಿ ಕೃತ್ಯವನ್ನು ಬಜರಂಗದಳ ಖಂಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಯ ವಿರುದ್ಧ ಬಜರಂಗದಳ ನಿರಂತರವಾಗಿ ಹೋರಾಟ ನಡೆಸುತ್ತದೆ ನೀವು ನಮನ್ನು ಬಂಧಿಸಿದರು ನಮ್ಮ ಹೋರಾಟ ನಿಲ್ಲದು ಎಂದು ಬಜರಂಗದಳ ಮಂಗಳೂರು ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಸಿದೆ.


Spread the love