ಬಜೆಟಿನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮ: ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಡೆರಿಕ್ ಡಿಸೋಜಾ ಹರ್ಷ

ಬಜೆಟಿನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮ: ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಡೆರಿಕ್ ಡಿಸೋಜಾ ಹರ್ಷ

ಉಡುಪಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಬಜೆಟಿನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಘೋಷಿಸಿ 200 ಕೋಟಿ ರೂ ಅನುದಾನವನ್ನು ನೀಡಿರುವುದಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಡೆರಿಕ್ ಡಿಸೋಜಾ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ಅನುದಾನ ಕ್ರೈಸ್ತರ ಬಹುದಿನದ ಬೇಡಿಕೆಯಾಗಿದ್ದು , ಪ್ರಯತ್ನದ ಫಲವಾಗಿ ಮುಖ್ಯಮಂತ್ರಿಗಳು ಈ ಬಜೆಟಿನಲ್ಲಿ ನಿಗಮ ಮತ್ತು ಅನುದಾನ ಘೋಷಿಸಿದ್ದು ಕ್ರೈಸ್ತ ಸಮುದಾಯದ ಏಳಿಗೆಗೆ ಹೆಚ್ಚು ಸಹಕಾರಿಯಾಗಲಿದೆ.

ಕೈಸ್ತ ಸಮುದಾಯವರ ಅನೇಕ ವರ್ಷಗಳ ಬೇಡಿಕೆಯಾದ ಕ್ರೈಸ್ತ ಅಭಿವೃದ್ಧಿ ನಿಗಮವನ್ನು ಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ, ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜ ಅವಿರತ ಶ್ರಮವಹಿಸಿದ್ದು, ಅವರ ಹೋರಾಟ ಹಾಗೂ ಪಕ್ಷದ ಇತರ ನಾಯಕರ ಪ್ರಯತ್ನದಿಂದ ಕ್ರೈಸ್ತ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಕನಸು ಈ ಬಜೆಟ್ನಲ್ಲಿ ನನಸಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.