ಬಜೆಟ್ ಸುಳ್ಳು ಭರವಸೆಗಳ ಕಂತೆ – ನಳಿನ್‌ಕುಮಾರ್ ಕಟೀಲ್

Spread the love

ಬಜೆಟ್ ಸುಳ್ಳು ಭರವಸೆಗಳ ಕಂತೆ – ನಳಿನ್‌ಕುಮಾರ್ ಕಟೀಲ್

ಮಂಗಳೂರು: ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು  ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್  ತಿಳಿಸಿದ್ದಾರೆ.
ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದರೂ, ಬಜೆಟ್ ನಲ್ಲಿ ಇದರ ವೆಚ್ಚದ ಉಲ್ಲೇಖವಿಲ್ಲ .ಒಟ್ಟಿನಲ್ಲಿ ಬಜೆಟ್ ಸುಳ್ಳು ಭರವಸೆಗಳ ಕಂತೆಯಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಸರ್ವರಿಗೂ ಸಮಪಾಲು ಹಾಗೂ ಸಮಬಾಳು ಸರಕಾರದ ನೀತಿಯಾಗಿರಬೇಕು. ಆದರೆ ಸಿದ್ದರಾಮಯ್ಯ ಅವರು ಬಜೆಟ್ ನಲ್ಲೂ ಅಲ್ಪಸಂಖ್ಯಾತರ ತುಷ್ಟೀಕರಣವನ್ನು ಅನುಸರಿಸಿದ್ದಾರೆ. ಬಹುಸಂಖ್ಯಾತರ ಹಿತವನ್ನು ಈ ಬಜೆಟ್ ಕಡೆಗಣಿಸಿದೆ. ನೋಂದಣಿ ಮತ್ತು ಮುದ್ರಾಂಕ ದರ ಹೆಚ್ಚಳ, ವಾಹನಗಳ ತೆರಿಗೆ ಹೆಚ್ಚಳ ಭವಿಷ್ಯದಲ್ಲಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಮಾರಕವಾಗಿ ಪರಿಣಮಿಸಲಿದೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

Spread the love