ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

Spread the love

ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ

ಮಂಗಳೂರು : ಪದ್ಮಶ್ರೀ ಪುರಸ್ಕೃತ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನದಿಂದ ನಾಡು ಓರ್ವ ಶ್ರೇಷ್ಠ ವಿದ್ವಾಂಸನನ್ನು ಕಳಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಪ್ರವಚನಗಳ ಮೂಲಕ ಭಾರತೀಯ ತತ್ವ ಶಾಸ್ತ್ರ ಮತ್ತು ಹಿಂದೂ ಧರ್ಮಗ್ರಂಥಗಳ ಸಾರವನ್ನು ನಾಡಿನಾದ್ಯಂತ ಪಸರಿಸಿದ ಬನ್ನಂಜೆ ಅವರು ಆಧ್ಯಾತ್ಮಿಕ ಲೋಕಕ್ಕೆ ಅನನ್ಯ ಕೊಡುಗೆ ನೀಡಿದವರು. ಭಾರತೀಯ ಸಂಸ್ಕೃತಿಯ ಮೌಲ್ಯಗಳ ಬಗ್ಗೆ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸಲು ಶ್ರಮಿಸಿದ ಬನ್ನಂಜೆ ಅವರ ನೆನಪು ಸಾರಸ್ವತ ಲೋಕದಲ್ಲಿ ಅಜರಾಮರವಾಗಿ ಉಳಿಯಲಿದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love