ಬಸ್ಸಿನಲ್ಲಿ ಪರಿಚಯಸ್ಥ ಯುವತಿ ಜೊತೆ ಮಾತನಾಡಿದ ವಿದ್ಯಾರ್ಥಿ ಮೇಲೆ ಹಲ್ಲೆ

Spread the love

ಬಸ್ಸಿನಲ್ಲಿ ಪರಿಚಯಸ್ಥ ಯುವತಿ ಜೊತೆ ಮಾತನಾಡಿದ ವಿದ್ಯಾರ್ಥಿ ಮೇಲೆ ಹಲ್ಲೆ

ಕುಂದಾಪುರ: ಪರಿಚಯದ ಯುವತಿಯ ಜೊತೆ ಮಾತನಾಡಿದ್ದಕ್ಕೆ ಯುವಕನೋರ್ವನಿಗೆ ನಾಲ್ವರು ಯುವಕರು ಬಸ್ಸಿನಲ್ಲೇ ಹಲ್ಲೆ ನಡೆಸಿರುವ ಘಟನೆ ಗುರುವಾರ ಹಾಲಾಡಿ ಸಮೀಪದ ಕಾಸಾಡಿ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಬಿದ್ದಕಲ್‌ ಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಶಾಂಕ್ ಎಂದು ಗುರುತಿಸಲಾಗಿದೆ.

ಬೆಳಿಂಜೆ ನಿವಾಸಿ ಶಶಾಂಕ್ ಅವರು ಸ್ನೇಹಿತರಾದ ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿರುವಾಗ ನಾಲ್ವರ ತಂಡ ಏಕಾಏಕಿ ಗಲಾಟೆಗಿಳಿದಿದ್ದು, ಯುವತಿ ಜೊತೆ ಮಾತನಾಡಿದ್ದನ್ನು ಪ್ರಶ್ನಿಸಿ ಶಶಾಂಕ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆ ಮಾಡಿದವರ ಪೈಕಿ ಮೂವರು ಬಸ್ಸಿನಿಂದ ಇಳಿದು ಹೋಗಿದ್ದು ಓರ್ವ ಮಾತ್ರ ಕುಂದಾಪುರದವರೆಗೆ ಬಸ್ಸಿನಲ್ಲೇ ಬಂದಿದ್ದಾನೆ ಎನ್ನಲಾಗಿದೆ. ಗಾಯಾಳು ಯುವಕನಿಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯುವಕನ ಮೇಲಿನ ಹಲ್ಲೆ ಪ್ರಕರಣದ ಸಂಬಂಧ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸಿಪಿಐ ಗೋಪಿಕೃಷ್ಣ, ಪಿಎಸ್‌ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು ತನಿಖೆ ನಡೆಯುತ್ತಿದೆ


Spread the love