ಬಸ್ಸು – ಬೈಕ್ ನಡುವೆ ಅಪಘಾತದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಸಾವು

Spread the love

ಬಸ್ಸು – ಬೈಕ್ ನಡುವೆ ಅಪಘಾತದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಸಾವು

ಮಂಗಳೂರು: ಖಾಸಗಿ ಬಸ್ಸೊಂದು ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪೋಲಿಸ್ ಕಾನ್ ಸ್ಟೇಬಲ್ ಒರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಗುರುಪುರದಲ್ಲಿ ನಡೆದಿದೆ.

ಮೃತರನ್ನು ಬೆಳುವಾಯಿ ನಿವಾಸಿ ಮಹೇಶ್ ಲಮಾಣಿ ಎಂದು ಗುರುತಿಸಲಾಗಿದೆ.

ಮಾಹಿತಿಗಳ ಪ್ರಕಾರ ಬೆಳುವಾಯಿಂದ ಮಂಗಳೂರು ಕಡೆಗೆ ತಮ್ಮ ಬೈಕಿನಲ್ಲಿ ತೆರಳುತ್ತಿದ್ದ ಲಮಾಣಿ ಅವರಿಗೆ ಅದೇ ರಸ್ತೆಯಲ್ಲಿ ಬೆಳುವಾಯಿಯಿಂದ ಮಂಗಳೂರಿನತ್ತ ಬರುತ್ತಿದ್ದ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಲಮಾಣಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಸ್ಥಳೀಯ ಟ್ರಾಫಿಕ್ ಠಾಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಸಿದ್ದಾರೆ.


Spread the love