ಬಸ್ ಮತ್ತು ಬೈಕ್ ನಡುವೆ ಡಿಕ್ಕಿ : ಓರ್ವ ಸಾವು : ಇನ್ನೋರ್ವ ಗಂಭೀರ

Spread the love

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ : ಓರ್ವ ಸಾವು : ಇನ್ನೋರ್ವ ಗಂಭೀರ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಅರಂತೋಡಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದಿದೆ.ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.

ಮೃತಪಟ್ಟವರನ್ನು ವಿನುತ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ರಾಜಪ್ಪ ಎಂದು ತಿಳಿದುಬಂದಿದೆ. ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ.

ಸುಳ್ಯ ಪೋಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


Spread the love