ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಖಂಡಿಸಿ ದೇಶದಾದ್ಯಂತ ನಾಳೆ ವಿಶ್ವ ಹಿಂದೂ ಪರಿಷದ್ ಪ್ರತಿಭಟನೆ
ಮಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಹಾಗೂ ಧಾರ್ಮಿಕ ಮುಖಂಡನ ಬಂಧನದ ವಿರುದ್ಧ ವಿಶ್ವಹಿಂದೂ ಪರಿಷತ್ ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ, ತಾಲ್ಲೂಕುಗಳಲ್ಲಿ, ಹೋಬಳಿಗಳಲ್ಲಿ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಾಗೂ ಬಂಧನವಾಗಿರುವ ಧಾರ್ಮಿಕ ಮುಖಂಡನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪವೆಲ್ ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಜಿಹಾದಿ ಅಂಶಗಳಿಂದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ಕಿರುಕುಳ, ಹಿಂದೂ ದೇವಾಲಯಗಳು ಮತ್ತು ಪ್ರತಿಮೆಗಳನ್ನು ಅಪವಿತ್ರಗೊಳಿಸುವುದು ಮತ್ತು ಹಿಂದೂ ಆಸ್ತಿಗಳ ಅಪವಿತ್ರಗೊಳಿಸುವಿಕೆ ಇನ್ನೂ ಮುಂದುವರೆದಿದೆ. ಅವರನ್ನು ತಡೆಯಲು ಸರಕಾರ ಯಾವುದೇ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಇವುಗಳನ್ನು ವಿರೋಧಿಸಿ ಹಿಂದೂ ಸಮಾಜವು ಢಾಕಾ, ಚಿತ್ತಗಾಂಗ್ ಮೊದಲಾದ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ಆಯೋಜಿಸಿದೆ. ವಿಶ್ವ ಸಮುದಾಯ ಮತ್ತು ಮತ್ತು ಭಾರತ ಸರ್ಕಾರ ನಿರೀಕ್ಷೆಯಂತೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ.
ಇದಕ್ಕೆ ವ್ಯತಿರಿಕ್ತವಾಗಿ ಭದ್ರತೆ ಮತ್ತು ಸಂಘಟನೆಗಾಗಿ ಹಿಂದೂ ಸಮಾಜವನ್ನು ಜಾಗೃತಗೊಳಿಸಿದ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದೆ ಮತ್ತು ಜಾಮೀನು ಸಹ ನಿರಾಕರಿಸಲಾಗಿದೆ. ಈ ಬಂಧನವನ್ನು ವಿರೋಧಿಸಿ, ಹಿಂದೂ ನಾಯಕನ ಬಿಡುಗಡೆಗೆ ಒತ್ತಾಯಿಸಿ ಹಾಗೂ ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗಾಗಿ ಆಗ್ರಹಿಸಿ ನಾಳೆ ದೇಶದಾದ್ಯಂತ ಪ್ರತಿಭಟನೆ ನಡೆಸಲು ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ.
Very good. We must support Bangla Hindu