ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ

Spread the love

ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದು ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರ ನೇತೃತ್ವದ ತಂಡ ಹಲಸೂರು ಗೇಟ್ ಠಾಣೆಯಲ್ಲಿ ಆರೋಪಿ ಆದಿತ್ಯ ನನ್ನು ವಶಕ್ಕೆ ಪಡೆದಿದೆ.

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಆರೋಪಿಯನ್ನು ಹಸ್ತಾಂತರಿಸಿದರು.

ಮೊದಲು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯನನ್ನು ಮಂಗಳೂರು ಪೊಲೀಸರಿಗೆ ಒಪ್ಪಿಸಬೇಕು ಎಂದು ನಿರ್ಣಯಿಸಲಾಗಿತ್ತು. ಕೊನೆಯ ಕ್ಷಣದಲ್ಲಿ ಭದ್ರತಾ ದೃಷ್ಟಿಯಿಂದ ಹಲಸೂರು ಗೇಟ್ ಠಾಣೆಯಲ್ಲಿ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಳಿಸುವ ನಿರ್ಧಾರವನ್ನು ಬೆಂಗಳೂರು ಪೊಲೀಸರು ಕೈಗೊಂಡರು.

ಶೀಘ್ರವೇ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆರೋಪಿ ಆದಿತ್ಯ ರಾವ್‌ನನ್ನು ತನಿಖಾ ಧಿಕಾರಿಗಳು ಮಂಗಳೂರಿಗೆ ಕರೆದೊಯ್ಯಲಿದ್ದಾರೆ. ಅಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.


Spread the love