Home Mangalorean News Kannada News ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

Spread the love

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್ ಪಾಸ್‌ಗೆ ಸಂಬಂಧಿಸಿದಂತೆ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಪ್ರಯಾಣಿಕರಿಗೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ, ಕೆ-ರೈಡ್ ರೈಲ್ವೆ ಕಲ್ಪಿಸಿದ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್ ನಿರ್ಮಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಶುಕ್ರವಾರ ಚರ್ಚಿಸಿ, ಸ್ಥಳ ಪರಿಶೀಲಿಸಿದರು. “ಈ ಪ್ರದೇಶದಲ್ಲಿ ಸುಗಮ ವಾಹನ ಸಂಚಾರಕ್ಕೆ ಬೇಕಾದ ವ್ಯವಸ್ಥೆಯಲ್ಲಿ ಯಾವುದೇ ತೊಡಕುಗಳು ಆಗಬಾರದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಸಚಿವರು, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಆಗುತ್ತಿರುವ ರಸ್ತೆ, ಪಾರ್ಕ್‌, ನೀರಿನ ಸಂಪರ್ಕ ಮತ್ತು ಒಳಚರಂಡಿ ವ್ಯವಸ್ಥೆ, ಅಂಡರ್‌ಪಾಸ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದರಲ್ಲದೆ, ಎಲ್ಲಾ ಕೆಲಸಗಳನ್ನು ತ್ವರಿತ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕು. ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಜತೆಯಲ್ಲಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಾಣಸವಾಡಿ, ಕಮ್ಮನಹಳ್ಳಿ, ಕಲ್ಯಾಣನಗರ, ಕಾಚರಕನಹಳ್ಳಿ, ಲಿಂಗರಾಜಪುರಂ, ಎಂ.ಎಸ್‌. ನಗರಗಳಲ್ಲಿ ಕ್ಷೇತ್ರ ಪ್ರದಕ್ಷಿಣೆ ಮಾಡಿದ ಸಚಿವ ಕೆ.ಜೆ.ಜಾರ್ಜ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರಲ್ಲದೆ, ಅಭಿವೃದ್ದಿ ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಚರಂಡಿ ವ್ಯವಸ್ಥೆಯ ಕಾಮಗಾರಿ ಪರಿಶೀಲನೆ

ಕಮ್ಮನಹಳ್ಳಿಯ ಜಯಲಕ್ಷ್ಮಿ ಶಾಲೆಯ ಸಮೀಪದ ಕಾಳಮ್ಮ ರಸ್ತೆ ಬಳಿ ಪ್ರಗತಿಯಲ್ಲಿರುವ ಜಲಮಂಡಳಿಯ ನೀರು ಮತ್ತು ಒಳಚರಂಡಿ ನಿರ್ಮಾಣ‌ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಈ ಭಾಗದಲ್ಲಿ ಮನೆಮನೆಗೆ ನೀರಿನ ವ್ಯವಸ್ಥೆ ಹಾಗೂ ಉತ್ತಮ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕುರಿತು ಜನರ ನಿರೀಕ್ಷೆಗಳಿಗೆ ಸ್ಪಂದಿಸಬೇಕು. ತ್ವರಿತಗತಿಯಲ್ಲಿ ಕಾಮಗಾರಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಣಸವಾಡಿ ಓಎಂಬಿಆರ್ ಲೇಔಟ್‌, ಕಲ್ಯಾಣನಗರ, ಹೆಚ್‌ಆರ್‌ಬಿ‌ಆರ್ ಲೇಔಟ್‌ ಹಾಗೂ ಲಿಂಗರಾಜಪುರಂನ ಕೆ.ಎಸ್.ಎಫ್.ಸಿ. ಲೇಔಟ್‌ನ ಪೀನಿಯಲ್ ಚರ್ಚ್ ಭಾಗಗಳಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ವ್ಯವಸ್ಥೆಯ ನಿರ್ಮಾಣ ಕಾಮಗಾರಿ, ಕಮ್ಮನಹಳ್ಳಿಯ ಎ.ಕೆ.ಕಾಲೋನಿಗೆ ಹೊಂದಿಕೊಂಡಿರುವ ಸೇನಾ ವಿಹಾರ ಆವರಣ, ಜಾನಕಿರಾಮ ಲೇಔಟ್‌ ಹಾಗೂ ಎಂ.ಎಸ್.ನಗರದ ಜೈಭಾರತ್ ನಗರದ ಒಳಚರಂಡಿ ವ್ಯವಸ್ಥೆ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.

ಡಾ.ಎಸ್.ಕುಮಾರ್ ಲೇಔಟ್‌ನಲ್ಲಿ ಪ್ರಗತಿಯಲ್ಲಿರುವ ಯು.ಎಫ್.ಡಬ್ಲ್ಯೂ. ಯೋಜನೆಯ ಕಾಮಗಾರಿಯನ್ನು ಪರಿಶೀಲಿಸಿ, ನೀರು ಸೋರಿಕೆ ಮತ್ತು ನೀರಿನ ಬಿಲ್ಲಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಡಾ.ರಾಜ್‌ಕುಮಾರ್‌ ಪಾರ್ಕ್‌ ಕಾಮಗಾರಿ ಶೀಘ್ರ ಪೂರ್ಣ
ಕಮ್ಮನಹಳ್ಳಿಯ ಡಾ.ರಾಜ್‌ಕುಮಾರ್ ಪಾರ್ಕ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆಗಳ ಉನ್ನತೀಕರಣ ಕಾಮಗಾರಿ ಪರಿಶೀಲಿಸಿದ ಸಚಿವರು, “ಈ ಭಾಗದ ನಾಗರಿಕರಿಗೆ ಉತ್ತಮ ಗುಣಮಟ್ಟದ ರಸ್ತೆಗಳು ಹಾಗೂ ಪಾರ್ಕ್‌ನಲ್ಲಿ ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಪ್ರಗತಿಯಲ್ಲಿರುವ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಂಡು, ನಾಗರಿಕರ ಸೇವೆಗೆ ಲಭ್ಯವಾಗಲಿವೆ. ಪಾರ್ಕ್‌ನಲ್ಲಿ ವಾಕಿಂಗ್ ಪಾಥ್, ಓಪನ್ ಜಿಮ್ ಮತ್ತು ಶೌಚಾಲಯ ವ್ಯವಸ್ಥೆ, ಮ್ಯಾಪಿಂಗ್ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ರೂಪಿಸಬೇಕು,” ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ಈ ವೇಳೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಮತ್ತು ಜಿಬಿಎ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version