ಬಾನೆತ್ತರಕ್ಕೆ ಮೊಳಗಿದ ಕೋಟಿಕಂಠ ಗಾಯನ

Spread the love

 ಬಾನೆತ್ತರಕ್ಕೆ ಮೊಳಗಿದ ಕೋಟಿಕಂಠ ಗಾಯನ

ಮಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಅ.28ರ ಶುಕ್ರವಾರ ಮಂಗಳೂರು ತಾಲೂಕು ಪಂಚಾಯತ್ ಹಾಗೂ ತಾಲೂಕು ಆಡಳಿತ ಸೌಧ (ಮಿನಿ ವಿಧಾನ ಸೌಧ) ಆವರಣದಲ್ಲಿ ಹಾಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕವಿ ಕುವೆಂಪು ಅವರ ನಾಡಗೀತೆ ಮೂಲಕ ಕೋಟಿ ಕಂಠ ಗಾಯನವನ್ನು ಪ್ರಾರಂಭಿಸಲಾಯಿತು. ನಂತರ ಕ್ರಮವಾಗಿ ಹುಯಿಲಗೊಳ ನಾರಾಯಣ್ ರಾವ್ ಅವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ರಚನೆಯ ಬಾರಿಸು ಕನ್ನಡ ಡಿಂಡಿಮವ, ಡಿ.ಎಸ್ ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಚೆನ್ನ ವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಕೊನೆಯಲ್ಲಿ ಹಂಸಲೇಖ ರಚನೆಯ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಹಾಡಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಮದನ್ ಮೋಹನ್, ತಾಲೂಕು ಉಪ ತಹಶೀಲ್ದಾರ ಪುಟ್ಟರಾಜ್, ತಾಲೂಕು ಪಂಚಾಯತ್ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು, ತಾಲೂಕು ಆಡಳಿತ ಸೌಧದ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು, ದೂರದೃಷ್ಟಿ ಪ್ರಶಿಕ್ಷಾಣಾರ್ಥಿಗಳು ಭಾಗವಹಿಸಿದ್ದರು.

ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಲೋಕೇಶ್ ಸಿ ಸ್ವಾಗತಿಸಿದರು.


Spread the love