ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣ ದಾಖಲು

Spread the love

ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣ ದಾಖಲು
 
ಉಪ್ಪಿನಂಗಡಿ: ಬಾಲಕನಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಲ್ಪಟ್ಟ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಅಬ್ದುಲ್ಲಾ ಬಿಳಿಯೂರು (36) ಪ್ರಕರಣದ ಆರೋಪಿ.

ಲೈಂಗಿಕ ಕಿರುಕುಳ ನೀಡಿರುವುದಾಗಿ ನೊಂದ ಬಾಲಕ ಶಾಲೆಯಲ್ಲಿ ನೀಡಿದ ಮಾಹಿತಿಯಂತೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಲಾಗಿತ್ತು. ಅವರ ಸಲಹೆಯಂತೆ ತನ್ನ ತಾಯಿಯೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ಸಲ್ಲಿಸಿರುತ್ತಾನೆ.

ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


Spread the love

Leave a Reply