ಬಾವಲಿ ಗಡಿಭಾಗದಲ್ಲಿ ಸಚಿವರಿಂದ ಪರಿಶೀಲನೆ

Spread the love

ಬಾವಲಿ ಗಡಿಭಾಗದಲ್ಲಿ ಸಚಿವರಿಂದ ಪರಿಶೀಲನೆ

ಮೈಸೂರು: ಗಡಿಭಾಗದಲ್ಲಿ ಕೇರಳ ಸರ್ಕಾರ ಸ್ಥಾಪಿಸಿರುವಂತೆ ರಾಜ್ಯ ಸರ್ಕಾರದಿಂದಲೂ ಮಾದರಿ ಪರೀಕ್ಷೆಯ ಕೇಂದ್ರವನ್ನು ಸ್ಥಾಪಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಗಡಿ ಭಾಗಗಳಲ್ಲಿ ಕೈಗೊಳ್ಳಲಾಗಿರುವ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸುವ ಸಲುವಾಗಿ ಕರ್ನಾಟಕ -ಕೇರಳ ಗಡಿಪ್ರದೇಶ ಬಾವಲಿ ಚೆಕ್ ಪೆÇೀಸ್ಟ್‍ಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗಡಿ ಪ್ರವೇಶಿಸುವ ಪ್ರತಿಯೊಬ್ಬರೂ ಆರ್.ಟಿ.ಪಿಸಿ.ಆರ್. ಪರೀಕ್ಷೆ ವರದಿ ನೆಗೆಟಿವ್ ಇರುವುದು ಕಡ್ಡಾಯವಾಗಿದ್ದು, ವರದಿ ಇಲ್ಲದೆ ಬರುವವರನ್ನು ವಾಪಸ್ ಕಳುಹಿಸಲಾಗುತ್ತಿರುವುದಾಗಿ ಹೇಳಿದ ಅವರು, ರಾಜ್ಯದ ತರಕಾರಿಗಳಿಗೆ ಕೇರಳದಲ್ಲಿ ಮಾರುಕಟ್ಟೆಯಿದ್ದು, ತರಕಾರಿಯನ್ನು ಹೆಚ್ಚಾಗಿ ಈ ಗಡಿ ಮೂಲಕವೇ ಕೇರಳಕ್ಕೆ ಸಾಗಣೆ ಮಾಡಲಾಗುತ್ತದೆ. ಹೀಗಾಗಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿದ್ದು, ಸಾವು-ನೋವಿನ ಸಂದರ್ಭದಲ್ಲಿ ತುರ್ತು ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು.

ಈ ವೇಳೆ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ನರಗುಂದ್, ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಜತೆಗಿದ್ದರು.


Spread the love

Leave a Reply

Please enter your comment!
Please enter your name here