ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರಕ್ಕೆ ಸಿದ್ದರಾಮಯ್ಯ ಭೇಟಿ

Spread the love

ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರಕ್ಕೆ ಸಿದ್ದರಾಮಯ್ಯ ಭೇಟಿ

ಮಂಗಳೂರು: ಉಳ್ಳಾಲ ಭೇಟಿ ನಿಮಿತ್ತ ಮಂಗಳೂರಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬಿಕರ್ನಕಟ್ಟೆಯ ಬಾಲಯೇಸು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಬಾಲಯೇಸು ಪುಣ್ಯಕ್ಷೇತ್ರದ ನಿರ್ದೇಶಕರಾದ ವಂ ರೋವೆಲ್ ಡಿ’ಸೋಜಾ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿ ಪ್ರಾರ್ಥನೆ ಸಲ್ಲಿಸಿದರು. ಜನವರಿ 14ರಂದು ಪುಣ್ಯಕ್ಷೇತ್ರದ ಮಹೋತ್ಸವ ಜರುಗಲಿದ್ದು ಸಿದ್ದರಾಮಯ್ಯ ಶುಭಕೋರಿದರು.

ಈ ವೇಳೆ ವಿಧಾನಸಭೆಯ ಉಪನಾಯಕರಾದ ಯುಟಿ ಖಾದರ್ ಮಾಜಿ ಶಾಸಕರುಗಳಾದ ಜೆ ಆರ್ ಲೋಬೊ, ಮೊಯ್ದಿನ್ ಬಾವಾ, ಅಭಯಚಂದ್ರ ಜೈನ್, ಯುಟಿ ಖಾದರ್, ಐವನ್ ಡಿಸೋಜಾ, ಯುವ ನಾಯಕ ಮಿಥುನ್ ರೈ ಹಾಗೂ ಇತರರು ಉಪಸ್ಥಿತರಿದ್ದರು.


Spread the love